ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಿಲ್ಲೆ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ಮನವಿ

Lingaraj Badiger
Updated On : 29 Aug 2013, 12:05 pm

ಯಾದಗಿರಿ: ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ಪಡೆದುಕೊಳ್ಳುವಂತಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರಿಗೆ ವೀರಭಾರತಿ ಪ್ರತಿಷ್ಠಾನದ ಅಧ್ಯಕ್ಷ ವೈಜನಾಥ ಹಿರೇಮಠ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.
ನಗರಕ್ಕೆ ಬುಧವಾರ ಆಗಮಿಸಿದ್ದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವ ಕುರಿತು ಪರಿಶೀಲಿಸಿ, ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಸಲಹೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಉದ್ಘಾಟನೆ ನಡೆದ ಬಗ್ಗೆ ತನಿಖೆಯಾಗಬೇಕು ಮತ್ತು ಕೆರೆ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಬೇಕು. ಅಲ್ಲದೇ ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ತ್ವರಿತವಾಗಿ ನೇಮಕ ಮಾಡಿಕೊಳ್ಳಬೇಕು. ಜಿಲ್ಲೆಯಾಗಿ 4 ವರ್ಷ ಸಮೀಪಿಸುತ್ತಿದ್ದರೂ ಜಿಲ್ಲಾ ಕೇಂದ್ರಸ್ಥಾನದಲ್ಲಿ ಯಾವುದೇ ಕಚೇರಿಯಲ್ಲಿ ಕೆಲಸ ಕಾರ್ಯಗಳು ತ್ವರಿತವಾಗಿ ಆಗುತ್ತಿಲ್ಲ. ಇದಕ್ಕೆ ಕಾರಣ ಅಧಿಕಾರಿಗಳ ಕೊರತೆ, ಸಿಬ್ಬಂದಿ ಕೊರತೆ ಜತೆಗೆ ಹಾಲಿ ಅಧಿಕಾರಿಗಳ ಬೇಜವಬ್ದಾರಿಯೂ ಕಾರಣ ಎಂದು ಅವರು ವಿವರಿಸಿದರು.
ಯೋಜನೆ ಬಳಸಿಕೊಳ್ಳಿ: ಮನವಿ ಸ್ವೀಕರಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಬಿಸ್ವಾಸ್, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸುಮಾರು 10 ಕೋಟಿಗೂ ಮಿಕ್ಕಿದ ಮೊತ್ತದ ಯೋಜನೆಗಳನ್ನು ವಿಶೇಷವಾಗಿ ಬಳಸಿಕೊಂಡು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement