ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪರಿಸರ ಸ್ವಚ್ಛತೆಯಿಂದ ಆರೋಗ್ಯ

Lingaraj Badiger
Updated On : 2 Dec 2013, 11:53 am

ಯಾದಗಿರಿ: ಗ್ರಾಮೀಣ ಭಾಗದ ಜನರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಆರೋಗ್ಯವಂತರಾಗಿ ಬಾಳಲು ಸಾಧ್ಯ. ಪ್ರತಿಯೊಬ್ಬರೂ ಕುಟುಂಬದ ಗೌರವಕ್ಕೆ ಶೌಚಲಯ ಕಟ್ಟಿಸಿಕೊಳ್ಳಬೇಕು ಎಂದು ಕಿರಣ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಿದ್ದಪ್ಪ ಲಿಂಗೇರಿ ಅಭಿಪ್ರಾಯಪಟ್ಟರು.
ನಿರ್ಮಲ ಭಾರತ ಯೋಜನೆಯಡಿಯಲ್ಲಿ ಹತ್ತಿಕುಣಿ ಗ್ರಾಮದಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ಚಚ್ಛತೆ ಮತ್ತು ಆರೋಗ್ಯ ಕುರಿತು ಮಾಹಿತಿ ಶಿಬಿರದಲ್ಲಿ ಮಾತನಾಡಿ, ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಜನರನ್ನು ತಲುಪದೇ ಇರುವದು ದುರದುಷ್ಟಕರ ಸಂಗತಿಯಾಗಿದೆ. ಮಹತ್ವಾಕಾಂಕ್ಷಿ ಯೋಜನೆಗಳಾದ ಗ್ರಾಮೀಣ ಉದ್ಯೋಗ ಖಾತ್ರಿ, ವಸತಿ ಯೋಜನೆ, 13ನೇ ಹಣಕಾಸು, ಬಿ.ಆರ್.ಜಿ.ಎಫ್. ಕುಡಿಯುವ ನೀರು ಮುಂತಾದ ಯೋಜನೆಗಳು ಉಳ್ಳವರ ಪಾಲಗಿದೆ. ಸರ್ಕಾರ ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳು: ಸೈದಪ್ಪ ಕೆ. ಗುತ್ತೆದಾರ ಮಾತನಾಡಿ, ಸ್ವಸಹಾಯ ಸಂಘದ ಸದಸ್ಯರು ಒಗ್ಗಟ್ಟಾಗಿ ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು. ಗ್ರಾಮೀಣ ಭಾಗದ ಮಹಿಳೆಯರು ಬಯಲು ವಿಸರ್ಜನೆ ಸಂದರ್ಭದಲ್ಲಿ ಸಾವು, ನೋವಿಗೆ ತುತ್ತಾಗುತ್ತಾರೆ. ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸಿದ್ದು, ಯೋಜನೆಗಳ ಲಾಭ ಪಡೆಯಬೇಕಾದರೆ ಸಂಘಟನೆ ಅವಶ್ಯವಾಗಿದೆ. ಪಂಚಾಯಿತ್‌ಗೆ ಬರುವ ಪ್ರತಿ ಯೋಜನೆಗಳನ್ನು ಹೋರಾಟದ ಮುಖಾಂತರ ಪಡೆಯಲು ಮುಂದೆ ಬರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ನಾಗಪ್ಪ ಹತ್ತಿಕುಣಿ, ಮಲ್ಲಿಕಾರ್ಜುನ ಕನ್ನಡಿ, 50ಕ್ಕೂ ಹೆಚ್ಚು ಮಹಿಳೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement