ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗ್ರಂಥಾಲಯ ಕಟ್ಟಡಕ್ಕೆ ಅನುದಾನ

Vishwanath S
Updated On : 3 Dec 2013, 11:34 am

ಚಿಂಚೋಳಿ: ಪಟ್ಟಣದಲ್ಲಿ ಹೊಸದಾಗಿ ಸಾರ್ವಜನಿಕ ಗ್ರಂಥಾಲಯ ಕಟ್ಟಡದ ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುದಾನ ಮಂಜೂರುಗೊಳಿಸಲಾಗುವುದು ಎಂದು ಶಾಸಕ ಡಾ. ಉಮೇಶ ಜಾಧವ ಭರವಸೆ ನೀಡಿದರು.
ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿರುವ ಸಾರ್ವಜನಿಕ ಗ್ರಂಥಾಲಯಕ್ಕೆ ಭಾನುವಾರ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಟ್ಟಣದ ಡಾ. ಅಂಬೇಡ್ಕರ್ ವೃತ್ತದ ಬಳಿ ಸಾರ್ವಜನಿಕ ಗ್ರಂಥಾಲಯವಿದ್ದು, ಕಟ್ಟಡವು ತುಂಬಾ ಹಳೆಯದಾಗಿರುವುದರಿಂದ ಕಟ್ಟಡವೂ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ಸಂಪೂರ್ಣವಾಗಿ ಸೋರುತ್ತಿರುವುದರಿಂದ ಬೆಲೆಬಾಳುವ ಪುಸ್ತಕಗಳು ಮತ್ತು ಗ್ರಂಥಗಳು ಹಾಳಾಗುತ್ತಿರುವುದರಿಂದ ಸದ್ಯ ತಾತ್ಕಾಲಿಕವಾಗಿ ಹಳೆ ಪ್ರವಾಸಿ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದರು.
ಸ್ಥಳೀಯರಿಗೆ ಪುಸ್ತಕ ದಿನಪತ್ರಿಕೆ, ವಾರಪತ್ರಿಕೆ, ಮ್ಯಾಗಜಿನ್ ಮತ್ತು ಇನ್ನಿತರ ಪುಸ್ತಕಗಳನ್ನು ಓದುವುದಕ್ಕಾಗಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯ ನಿರ್ಮಾಣಕ್ಕಾಗಿ ಸರ್ಕಾರದಿಂದ ಪ್ರಸಕ್ತ ಸಾಲಿನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಡಾ. ಶಾಂತವೀರ ಸುಂಕದ, ಪಪಂ ಸದಸ್ಯ ಅಬ್ದುಲ್ ಬಾಸೀತ್, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಜಗದೀಶಸಿಂಗ್ ಠಾಕೂರ, ಕೆ.ಎಂ.ಬಾರಿ, ತುಕಾರಾಮ ಪವಾರ, ಜಗನ್ನಾಥ ಇದಲಾಯಿ, ಸಂಗಯ್ಯ ಸ್ವಾಮಿ ಅಣವಾರ, ಬಸವರಾಜ ಮಲಿ, ಗ್ರಂಥಾಲಯ ಮೇಲ್ವಿಚಾರಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement