ಪರಿನಿರ್ವಾಣ ದಿನ: 57 ಜನರಿಂದ ರಕ್ತದಾನ
ಯಾದಗಿರಿ: ಡಾ.ಅಂಬೇಡ್ಕರ್ 57ನೇ ಪರಿನಿರ್ವಾಣ ಅಂಗವಾಗಿ ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ 57 ಜನರು ರಕ್ತದಾನ ಮಾಡಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಈ ರಕ್ತದಾನ ಶಿಬಿರವನ್ನು ನಗರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರಾಮನ ಗೌಡ, ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಮಾರುತಿ ಹುಜರತಿ ಸೇರಿದಂತೆ 57 ಇತರೆ ಜನರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಭಗವಂತ ಅನ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಲ್ಲಿಕಾರ್ಜುನ ಮುಕ್ಕಾ, ಐಸಿಟಿಸಿ ಮೇಲ್ವಿಚಾರಕಿ ಕು. ಆರತಿ ಧನುಶ್ರೀ, ಜಿಲ್ಲಾ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು, ಜಿಲ್ಲೆಯ 3 ತಾಲೂಕಿನ ಸಮಾಜ ಕಲ್ಯಾಣ ವಸತಿ ನಿಲಯಗಳ ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
--