15ರಂದು ಹೂಗಾರ ಸಮಾಜದ ಸಭೆ
ಜೇವರ್ಗಿ: ಡಿ.15 ರಂದು ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ತಾಲೂಕು ಹೂಗಾರ ಸಮಾಜದ ಸಭೆ ಕರೆಯಲಾಗಿದೆ ಎಂದು ಸಮಾಜದ ಅಧ್ಯಕ್ಷ ಬಸವರಾಜ ಹೂಗಾರ, ಕೋಣಸಿರಸಿಗಿ ಕಾರ್ಯದರ್ಶಿ ಪ್ರಕಾಶ ಪುಲಾರೆ ತಿಳಿಸಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ಸಭೆ ನಡೆಯಲಿದ್ದು, ಸಮಾಜದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.