ದಸಂಸ ಪ್ರತಿಭಟನೆ
ಕೆಂಭಾವಿ: ಪಟ್ಟಣದ ಗ್ರಾಪಂ ಕಚೇರಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ದಲಿತರಿಗೆ ಉದ್ಯೋಗ ಚೀಟಿ ವಿತರಿಸಿಲ್ಲ. ಪಿಡಿಒ, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್ ಸೇರಿ ದಲಿತರಿಗೆ ಮತ್ತು ಬಡ ಕೂಲಿ ಕಾರ್ಮಿಕರಿಗೆ ಇದರಿಂದ ಅನ್ಯಾಯವಾಗುತ್ತಿದೆ ಆರೋಪಿಸಿ ದಸಂಸ ಸದಸ್ಯರು ಶುಕ್ರವಾರ ಗ್ರಾಪಂ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು. 2013-14ನೇ ಸಾಲಿನಲ್ಲಿ ಎಸ್ಸಿ, ಎಸ್ಟಿ ಜನಾಂಗದ ಹೊಲಗಳಲ್ಲಿ ಕೃಷಿ ಹೊಂಡ, ಭೂ ಅಭಿವೃದ್ಧಿ, ನಮ್ಮ ಹೊಲ ನಮ್ಮ ದಾರಿ ಸೇರಿದಂತೆ ಹಲವು ಕೆಲಸಗಳನ್ನು ಮೇಲ್ವರ್ಗದ ಜಮೀನುಗಳಲ್ಲಿ ಮಾಡುತ್ತಿದ್ದು, ಈ ಕುರಿತು ವಿಚಾರಿಸಲು ಸಂಬಂಧಿಸಿದ ಗ್ರಾಪಂ ಕಚೇರಿಗೆ ಹೋದರೆ ಅಭಿವೃದ್ಧಿ ಅಧಿಕಾರಿಗಳು ಸಿಗುತ್ತಿಲ್ಲ. ಇಂಥಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.