ಯಾದಗಿರಿಯಲ್ಲಿ ಇಂದು ಬೃಹತ್ ಉದ್ಯೋಗ ಮೇಳ
ಗುರುಮಠಕಲ್: ಬೆಂಗಳೂರಿನ ಶಾಹಿ ಎಕ್ಸ್ಪೋರ್ಟ್ ಪ್ರೈ.ಲಿ. ವತಿಯಿಂದ ರವಿವಾರ ಬೆಳಿಗ್ಗೆ 10ಗಂಟೆಗೆ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಂಪನಿಯ ಹಿರಿಯ ಕಾರ್ಯ ನಿರ್ವಾಹಕ ಆಧಿಕಾರಿ ಕೀರ್ತಿ ಕುಮಾರ, ನಮ್ಮ ಕಂಪನಿಯು ಭಾರತದಲ್ಲಿ 34 ಶಾಖೆಗಳನ್ನು ಹೊಂದಿದೆ. ಬೆಂಗಳೂರಿನಲ್ಲಿಯೇ 30 ಶಾಖೆಗಳಿವೆ ಅದರ ಮೂಲಕ 70ಸಾವಿರ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದೆ ಎಂದು ತಿಳಿಸಿದ್ದಾರೆ. ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗದ ಸಂಪೂರ್ಣ ಮಾಹಿತಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನೀಡುವದರ ಜೊತೆಗೆ ಅವರನ್ನು ಆಯ್ಕೆ ಮಾಡಿಕೊಂಡು ಅಗತ್ಯ ತರಬೇತಿ ಕಂಪನಿ ವತಿಯಿಂದ ನೀಡಲಾಗುವದು ಆದ್ದರಿಂದ ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಿದ್ದಾರೆ.