ಕಳ್ಳನ ಬಂಧನ
ಗುಲ್ಬರ್ಗ ತಾಲೂಕಿನ ಹತಗುಂದಾ ಗ್ರಾಮದಲ್ಲಿ ಇತ್ತೀಚೆಗೆ ಮನೆ ಬೀಗ ಮುರಿದು 93 ಸಾವಿರ ಮೌಲ್ಯದ ನಗ- ನಾಣ್ಯ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ಅವನಿಂದ ಕಳವು ಮಾಡಿದ ವಸ್ತುಗಳನ್ನು ಜಪ್ತಿ ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಹತಗುಂದಾ ಗ್ರಾಮದ ಶಿವಲಿಂಗಪ್ಪ ಕಾರಬಾರಿ ಎಂಬವರ ಮನೆ ಬೀಗ ಮುರಿದು 22 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ, 36 ಸಾವಿರ ನಗದು ದೋಚಿದ್ದ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.