ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿದ್ಯಾರ್ಥಿಗಳಿಗೆ ಶಿಕ್ಷಕರೇ ದಾರಿ ದೀಪ

Mainashree
Updated On : 19 Dec 2013, 11:14 am

ಕ.ಪ್ರ. ವಾರ್ತೆ  ಸೇಡಂ  ಡಿ.18
ದೇಶದ ಭವಿಷ್ಯತ್ತನ್ನು ರೂಪಿಸುವ ವಿದ್ಯಾರ್ಥಿಗಳನ್ನು ಸರಿಯಾದ ರೀತಿಯಲ್ಲಿ ನಿರ್ದೇಶಿಸಬೇಕಾದ ಶಿಕ್ಷಕರು ದಾರಿ ತಪ್ಪಬಾರದು ಎಂದು ತಹಸೀಲ್ದಾರ್ ಪ್ರಕಾಶ ಕುದರಿ ತಾಕೀತು ಮಾಡಿದರು.
ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ತಾಲೂಕು ಘಟಕ ವತಿಯಿಂದ ಶಿಕ್ಷಕರಿಗಾಗಿ ಆಯೋಜಿಸಿದ್ದ ಕೆಸಿಎಸ್‌ಆರ್(ಕರ್ನಾಟಕ ನಾಗರಿಕ ಸೇವಾ ನಿಯಮ) ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೃತ್ತಿ ಮಾಹಿತಿ ಪಡೆಯಿರಿ: ಶಿಕ್ಷಕರು ಸರಿಯಾದ ರೀತಿಯಲ್ಲಿ ಮುಂದಾಗಲು ಕೆಸಿಎಸ್‌ಆರ್ ತರಬೇತಿ ಸಹಕಾರಿಯಾಗಿದ್ದು, ಇಂತಹ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ವೃತ್ತಿಯ ಬಗ್ಗೆ ಮಾಹಿತಿ ಪಡೆಯಬೇಕು ಎಂದರು.
ತಾಲೂಕಿನಲ್ಲಿ ಶಿಕ್ಷಕರು ತಮ್ಮ ಕಾರ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಈ ಕುರಿತು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಕೂಡಲೇ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಕಾರ್ಯಗತರಾಗಬೇಕು ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳಿಗೆ ದಾರಿ ತೋರಬೇಕಾದವರು..: ಶಿಕ್ಷಕರ ಪ್ರತಿಭಾ ಪರಿಷತ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಶಾಂತಪ್ಪ ಚಿಂಚೋಳಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಬೆಳಕಿದ್ದಂತೆ. ಅಂತಹ ಕರ್ತವ್ಯ ನಿರ್ವಹಿಸುವಲ್ಲಿ ಜಾಗೃತಿ ವಹಿಸಬೇಕು ಎಂದರು.
ಗುಲ್ಬರ್ಗ ಖಜಾನೆಯ ನಿವೃತ್ತ ಅಧಿಕಾರಿ ಶ್ರೀನಿವಾಸ ಕುಲಕರ್ಣಿ ವಿಶೇಷ ಉಪನ್ಯಾಸ ನೀಡಿದರು. ಪರಿಷತ್‌ನ ತಾಲೂಕಾಧ್ಯಕ್ಷ ಅಶೋಕರೆಡ್ಡಿ ಚಿಲುಮೆ ಅಧ್ಯಕ್ಷತೆ ಮಾತನಾಡಿದರು. ರಾಜ್ಯ ನಿರ್ದೇಶಕ ಶಿವರಾವ ಭೋವಿ, ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಭೀಮರೆಡ್ಡಿ ಬೆಜ್ಜ, ಪ್ರೌಢ ಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ನಾಗೇಂದ್ರ ನಾಟೀಕಾರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಬಸರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಪರಿಷತ್‌ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಳಿ, ಜಿಲ್ಲಾ ನಿರ್ದೇಶಕ ಮಣಿಸಿಂಗ್ ಚವ್ಹಾಣ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಪುತ್ರ ದಿಗ್ಗಾಂವ ಇದ್ದರು.
ನೀಲಕಂಠ ಮುತ್ತಗಿ ಕಾರ್ಯಕ್ರಮ ನಿರೂಪಿಸಿದರು. ಶರಣಬಸಪ್ಪ ಬೆನಕನಹಳ್ಳಿ ಸ್ವಾಗತಿಸಿದರು. ಮಹೇಶಕುಮಾರ್ ಭಾವಿಕಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement