ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅತ್ಯಾಚಾರ ಆರೋಪಿ ಪರಾರಿ

Mainashree
Updated On : 20 Dec 2013, 11:07 am

ಸೂಲಿಬೆಲೆ: ಹೊಸಕೋಟೆ ತಾಲೂಕಿನ ನಡವತ್ತಿ ಗ್ರಾಮದಲ್ಲಿ ಶಾಲಾ ಬಾಲಕಿಯೊಬ್ಬಳ ಮೇಲೆ ದುರಳನೊಬ್ಬ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಸದ್ಯ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನಡುವತ್ತಿ ಗ್ರಾಮದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಕಲಿಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಡಿ.19ರಂದು ರಾತ್ರಿ ಪಾಠ ಓದಿಕೊಳ್ಳಲೆಂದು ತನ್ನ ಸಂಬಂಧಿಕ ಸಂಪಗಿ ಎಂಬುವರ ಮನೆಗೆ ತೆರಳಿದ್ದಳು ಎನ್ನಲಾಗಿದೆ. ಓದಿನ ನಂತರ  ತನ್ನ ಮನೆಗೆ ಬಾಲಕಿ ಹಿಂದಿರುಗುವಾಗ ಅದೇ ಮನೆಯಲ್ಲಿ ಜೆಸಿಬಿ ಯಂತ್ರದ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ವಿಜಯಕುಮಾರ್ ಬಾಲಕಿಯನ್ನು ಸಮೀಪದ ಹಿಪ್ಪುನೇರಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕಿಗೆ ಪ್ರಜ್ಞೆ ತಪ್ಪಿದೆ. ರಾತ್ರಿ 10 ಗಂಟೆಯಾದರೂ ಮಗಳು ಮನೆಗೆ ಬಾರದನ್ನು ಅರಿತ ಬಾಲಕಿಯ ಹೆತ್ತವರು ಹುಡುಕಾಟ ನಡೆಸಿದಾಗ ಬಾಲಕಿ ಹಿಪ್ಪುನೇರಳೆ ತೋಟದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  ಅತ್ಯಾಚಾರ ಎಸೆಗಿರುವ ವಿಜಯಕುಮಾರ್ ಮೂಲತಃ ರಾಯಚೂರು ಜಿಲ್ಲೆಯವನ್ನಾಗಿದ್ದು, ಘಟನೆ ನಂತರ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಬಾಲಕಿಯ ತಂದೆ ನೀಡಿರುವ ದೂರು ದಾಖಲಿಸಿಕೊಂಡಿರುವ ತಿರುಮಲಶೆಟ್ಟಿಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement