ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಕಲೆಗಳ ಉಳಿಸುವಿಕೆಗೆ ಪ್ರೋತ್ಸಾಹಿಸಿ'

Mainashree
Updated On : 23 Dec 2013, 11:17 am

ಅಫಜಲ್ಪುರ: ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಜನಪದ ಹಾಗೂ ಸಾಂಪ್ರದಾಯಿಕ ಕಲೆಗಳನ್ನು ನಿಲ್ಲಿಸದೇ ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರೋತ್ಸಾಹಿಸುವುದರ ಜತೆಗೆ ವಿನೂತನ ಯೋಜನೆ ಜಾರಿಗೆ ತರಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್.ಸಿ. ಪಾಟೀಲ್ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಜನಪದ ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಪ್ರೋತ್ಸಾಹಿಸುವ ವಿನೂತನ ಯೋಜನೆಯ ಹಾಡಿರೆ ರಾಗಗಳ- ತೂಗೇರೆ ದೀಪಗಳು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ ಪ್ರಾಚಾರ್ಯ ಮಹಾದೇವಪ್ಪ ತಾಂಬೆ, ಉಪನ್ಯಾಸಕ ಟಿ. ಪರಮೇಶ್ವರ, ನಾಗರಾಜ, ವಿಶ್ವನಾಥ ಹೆರೂರ್, ಲಕ್ಷ್ಮಿಕಾಂತ ಹೂಗಾರ, ಬಾಬು ಹೂಗಾರ ಇದ್ದರು. ಆನಂದ ಕುಂಬಾರ ಸ್ವಾಗತಿಸಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement