ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸುದ್ದಿ ಸಂಕ್ಷೇಪ

Mainashree
Updated On : 23 Dec 2013, 11:22 am

ಪ್ರಿಯಾಂಕಾಗೆ 3ನೇ ರ್ಯಾಂಕ್
ಗುಲ್ಬರ್ಗ/ಶಹಾಬಾದ್: ನಗರದ ಪ್ರತಿಷ್ಠಿತ ಹೈ.ಕ. ಶಿಕ್ಷಣ ಸಂಸ್ಥೆಯ ಎಸ್.ಎಸ್. ಮರಗೋಳ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರಿಯಾಂಕಾ 2012-13ನೇ ಸಾಲಿನ ಬಿಎ 7ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ 3ನೇ ರ್ಯಾಂಕ್ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಪ್ರಾಚಾರ್ಯ ಅನೀಲಕುಮಾರ್ ಕೊಪ್ಪಳಕರ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಅರ್ಜಿ ಆಹ್ವಾನ
ಜೇವರ್ಗಿ: 2013- 14ನೇ ಸಾಲಿನ ಪರಿಶಿಷ್ಟ ಜಾತಿ ನಿರುದ್ಯೋಗಿ ಅಭ್ಯರ್ಥಿಗಳಿಗೆ ಲಘು ಮೋಟಾರ್ ವಾಹನ ತರಬೇತಿ ನೀಡಲು ತಾಲೂಕಿನ ಕನಿಷ್ಟ 8ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಡಿ.21ರಿಂದ ಪಡೆಯಬಹುದು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಕಾರ್ಡ್ ಸಂಖ್ಯೆ, ಆನಲೈನ್ ನೋಂದಣಿ ಸಂಖ್ಯೆ ಹಾಗೂ ವರ್ಗಾವಣೆ ಪ್ರಮಾಣ ಪತ್ರದ ಝಿರಾಕ್ಸ್ ಪ್ರತಿಗಳನ್ನು ದೃಢಿಕರಣದೊಂದಿಗೆ ಲಗತ್ತಿಸತಕ್ಕದ್ದು, ಅರ್ಜಿಯನ್ನು ಡಿ.31ರೊಳಗಾಗಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಅಪಘಾತ: ಸಾವು
ಗುಲ್ಬರ್ಗ: ಜೇವರ್ಗಿ ಸಿಂದಗಿ ರಸ್ತೆಯಲ್ಲಿರುವ ಫುಡ್‌ಪಾರ್ಕ್ ಹತ್ತಿರ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 35 ರಿಂದ 40ವರ್ಷ ವಯಸ್ಸಿನ ವ್ಯಕ್ತಿ ಸಾವಿಗೀಡಾಗಿದ್ದು, ಆತನ ಮೃತ ದೇಹದ ಮೇಲೆ ಅನೇಕ ವಾಹನಗಳು ಹರಿದುಹೋದ ಪರಿಣಾಮ ದೇಹ ಗುರುತು ಸಿಗದಷ್ಟು ಛಿದ್ರವಾಗಿದೆ. ಮೃತಪಟ್ಟವನು ಮಾನಸಿಕ ಅಸ್ವಸ್ಥ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಜೇವರ್ಗಿ  ಠಾಣೆಯ ಪಿಎಸ್‌ಐ ಸುಧೀರ ಬೆಂಕಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಪರಿಚಿತ ಶವ ಪತ್ತೆ
ಗುಲ್ಬರ್ಗ: ನಗರದ ಹೊರ ವಲಯದ ನಾಗನಹಳ್ಳಿ ಹತ್ತಿರದ ರೇಲ್ವೆ ಮೇಲ್ಸೇತುವೆಯ ಬಳಿ ರೈಲು ಹಳಿಯಲ್ಲಿ ಅಪರಿಚಿತ ವ್ಯಕ್ತಿ ಶವ ಭಾನುವಾರ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷದ ವಯಸ್ಸಿನ ವ್ಯಕ್ತಿಯಾಗಿದ್ದಾನೆ. ಗೋದಿ ಬಣ್ಣ ಮೈಬಣ್ಣ ಹಾಗೂ 5 ಅಡಿ ಎತ್ತರ ಇರುವ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement