ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಸಂಚಾರಿ ವಾಹನದಿಂದ ವಿಕಲಚೇತನರಿಗೆ ಜಾಗೃತಿ'

Vishwanath S
Updated On : 25 Dec 2013, 12:23 pm

ಗುಲ್ಬರ್ಗ: ಅಲ್ಪಸಂಖ್ಯಾತರ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ವಿಕಲಚೇತನರ ಯೋಜನೆಗಳ ಹಾಗೂ ಸಲಕರಣೆಗಳ ಮಾಹಿತಿಯನ್ನು 35 ಲಕ್ಷ ವೆಚ್ಚದ ಸಂಚಾರಿ ವಾಹನದ ಮೂಲಕ ಅವರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪೌರಾಡಳಿತ, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಹಾಗೂ ಹಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಗುಲ್ಬರ್ಗ ಅಂಗವಿಕಲರ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸೋಮವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಶಾಸಕರ ಅನುದಾನದಡಿ ವಿಕಲಚೇತನರಿಗಾಗಿ ತ್ರಿಚಕ್ರ ವಾಹನಗಳನ್ನು ಈಗಾಗಲೇ ವಿತರಿಸಲಾಗುತ್ತಿದ್ದು, ಪೌರಾಡಳಿತ ಇಲಾಖೆಯಡಿಯ 211 ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಶೇ.3ರಷ್ಟು ವಿಕಲಚೇತನರಿಗಾಗಿ ಕಾಯ್ದಿರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ರಮೇಶ ಮರಗೋಳ, ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಎಚ್.ಎಂ. ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಧಾಕೃಷ್ಣ ಎಂ., ಶಿಶು ಅಭಿವೃದ್ಧಿ ಅಧಿಕಾರಿ ತಿಪ್ಪಣ್ಣ ಶಿರಸಗಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬಿ.ಆರ್. ಪವಾರ ಇತರರು ಪಾಲ್ಗೊಂಡಿದ್ದರು.
ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ಮುಖ್ಯಸ್ಥ ದತ್ತು ಅಗರವಾಲ್ ಪ್ರಾಸ್ತಾವಿಕ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement