ವೈನ್ಶಾಪ್ಗಳ ಮೇಲೆ ಕ್ರಮಕ್ಕೆ ಆಗ್ರಹ
ಯಾದಗಿರಿ: ವೈನ್ ಶಾಪ್ಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುತ್ತಿರುವುದು, ರೆಸ್ಟೋರೆಂಟ್ ಹಾಗೂ ದಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಅಕ್ರಮ ಚಟುವಟಿಕೆಗೆ ದಾರಿಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ವೈನ್ ಶಾಪ್ಗಳಲ್ಲಿ ಕೇವಲ ಮದ್ಯ ಮಾರಾಟಕ್ಕೆ ಮಾತ್ರ ಅವಕಾಶವಿದೆ. ಆದರೆ ಕೆಲ ಶಾಪ್ಗಳಲ್ಲಿ ಅಲ್ಲಿಯೇ ಕುಡಿಯಲು ಅವಕಾಶ ನೀಡಲಾಗುತ್ತಿದೆ. ಹೋಟೆಲ್ ಹಾಗೂ ದಾಬಾಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.
ಗ್ರಾಮೀಣ ಭಾಗದಲ್ಲಿ ಚಿಲ್ಲರೆ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.
ಇದರಿಂದ ಅನೈತಿಕ ಚಟುವಟಿಕೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ ಎಂದು ಅವರು ದೂರಿದರು.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೂ ಅಕ್ರಮ ಮದ್ಯ ಮಾರಾಟದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೆಲ ವೈನ್ ಶಾಪ್ಗಳಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ದಿನಸಿ ಅಂಗಡಿಗಳಲ್ಲೂ ಸಾರಾಯಿ ದೊರೆಯುತ್ತಿರುವುದರಿಂದ ಹಳ್ಳಿಗಳ ಶಾಂತಿಯುತ ವಾತಾವರಣ ಹಾಳಾಗುತ್ತಿದೆ.
ಈ ಬಗ್ಗೆ ಗಮನಹರಿಸಿ ಅಕ್ರಮ ತಡೆಯಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಬೇಕು.
ಇಲ್ಲದಿದ್ದರೆ ಆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ವೆಂಕಟೇಶ ತುಳೇರ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದಾಸನಕೇರಿ, ಮಹಾದೇವಪ್ಪ ಗಣಪೂರ, ಭೀಮಣ್ಣ ಹೊಸಮನಿ, ಬಸವರಾಜ ಮಿಟ್ಟಾ, ಸುನೀಲ ರಾಠೋಡ, ರಾಘು ಬೀದರಕರ ಇತರರು ಎಚ್ಚರಿಸಿದ್ದಾರೆ. ಈ ಕುರಿತ ಮನವಿಪತ್ರವನ್ನು ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಅವರಿಗೆ ಸಲ್ಲಿಸಿದರು.