ಅಟಲ್‌ಜೀ ಜನಸ್ನೇಹಿ ಕೇಂದ್ರ ಹೆಚ್ಚಳಕ್ಕೆ ಆಗ್ರಹ
ಯಾದಗಿರಿ: ನಗರದಲ್ಲಿ ಇನ್ನೂ ನಾಲ್ಕೈದು ಕಡೆಗಳಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಬೇಕೆಂದು ಬಿಎಸ್ಸಾರ್ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ನಗರದಲ್ಲಿ ಒಂದೇ ಕಡೆ ಅಟಲ್ ಜೀ ಜನಸ್ನೇಹಿ ಕೇಂದ್ರ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಕಳೆದ ಕೆಲವು ದಿನಗಳಿಂದ ತಾಂತ್ರಿಕ ದೋಷದಿಂದ ಯಾವುದೇ ಕೆಲಸ ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಕೋರ್ಟ್ ಅಫಿಡವಿಟ್ ತೆಗೆದುಕೊಳ್ಳದೇ ಈ ಹಿಂದೆ ನೆಮ್ಮದಿ ಕೇಂದ್ರದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಮನವಿ ಸ್ವೀಕರಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಿಎಸ್‌ಆರ್ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷ ಅಶೋಕ ಮುದ್ನಾಳ, ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈದಪ್ಪ ಗುತ್ತೇದಾರ, ದುರ್ಗಯ್ಯ ತಾಂಡುರಕರ್, ಮಲ್ಲು ಎಸ್‌ಆರ್‌ಎಸ್, ಸಾವಿತ್ರಿ ಎಂ.ಪಾಟೀಲ್, ಕಲ್ಪನಾ ಎಸ್. ಮಹ್ಮದ, ಸಂತೋಷ, ಮಲ್ಲಮ್ಮ, ಶರಣಪ್ಪ, ಉಮಾದೇವಿ, ಸುಶೀಲ ಇತರರು ಇದ್ದರು.