ನೃತ್ಯ ಸ್ಪರ್ಧೆ: ಅಂಧ ಮಕ್ಕಳ ಸಾಧನೆ
ಗುಲ್ಬರ್ಗ: ನಗರದ ಹೈದ್ರಾಬಾದ್ ಕರ್ನಾಟಕ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು ರಾಯಚೂರಿನಲ್ಲಿ ನಡೆದ ರಾಜ್ಯ ಮಟ್ಟದ ನಾನಾ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.
ರಾಜ್ಯಮಟ್ಟದ ನೃತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರು 5 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಂಬಿಕಾ, ಶಾರದಾ, ಶ್ರುತಿ, ಸುರೇಖಾ, ಗಂಗಮ್ಮಾ ತಂಡವು ನೃತ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಬ್ರೈಲ್ ಲಿಪಿ ಓದುವ ಸ್ಪರ್ಧೆಯಲ್ಲಿ ದೀಪಾ ಪ್ರಥಮ, ಬರೆಯುವ ಸ್ಪರ್ಧೆಯಲ್ಲಿ ವೈಶಾಲಿ ಪ್ರಥಮ, ದೀಪಾ ತೃತೀಯ ಹಾಗೂ ಏಕಪಾತ್ರಾಭಿನಯದಲ್ಲಿ ಪಂಚಶೀಲ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸ್ಪರ್ಧೆಯಲ್ಲಿ 10 ಜಿಲ್ಲೆಗಳ ಮಕ್ಕಳು ಭಾಗವಹಿಸಿದ್ದರು. ವಿಜೇತರಾದ ವಿದ್ಯಾರ್ಥಿನಿಯರಿಗೆ ಸಂಘದ ಅಧ್ಯಕ್ಷ, ಎಲ್ಲ ಸದಸ್ಯರು ಹಾಗೂ ನಮ್ಮ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀಮತಿ ಅಂಬುಬಾಯ ಅಂಧ ಬಾಲಕಿಯರ ವಸತಿಯುವ ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹಾಗೂ ಎಲ್ಲ ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.