ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವೇತನ ತಾರತಮ್ಯ ನಿವಾರಿಸಲು ಆಗ್ರಹ

Parashurama
Updated On : 14 Feb 2013, 11:46 am

ಗುಲ್ಬರ್ಗ: ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಶಿಕ್ಷಕರ, ಉಪನ್ಯಾಸಕರ ಸಮಿತಿಯಿಂ ಜಿಲ್ಲಾ ಘಟಕ ಧರಣಿ ನಡೆಸಿತು. ಮುಖ್ಯಮಂತ್ರಿಗೆ ಬರೆದ  ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಹಾಗೂ ನೆರೆ ರಾಜ್ಯ ಸರ್ಕಾರಗಳ ನೌಕರರಿಗೆ ಹೋಲಿಕೆ ಮಾಡಿದಾಗ ಪ್ರಾಥಮಿಕ ಶಾಲಾ ಶಿಕ್ಷಕರ, ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಪದವಿ ಪೂರ್ವ ಉಪನ್ಯಾಸಕರು ಅತ್ಯಂತ ಕಡಿಮೆ ವೇತನ ಪಡೆಯುತ್ತಿದ್ದಾರೆ.  ಈ ವೇತನ ತಾರತಮ್ಯ ನಿವಾರಿಸುವಂತೆ  ಶಿಕ್ಷಕರಿಗೆ ಉಪನ್ಯಾಸಕರಿಗೆ ನೀಡುವ ವೇತನವನ್ನು ಮೂಲ ವೇತನದಲ್ಲಿ ವಿಲಿನಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಸರ್ಕಾರ  ಬಜೆಟ್ ಮಂಡನೆ ಮಾಡುವ ಸಂದರ್ಭದಲ್ಲಿ   ವೇತನ ತಾರತಮ್ಯ ನಿವಾರಣೆ ಹಾಗೂ ಮೂಲ ವೇತನದಲ್ಲಿ ವಿಶೇಷ ವೇತನ ವಿಲಿನಗೊಳಿಸುವ ಬಗ್ಗೆ ಪ್ರಸ್ತಾಪ ಮಾಡದೆ ಇರುವುದರಿಂದ ಸಮಸ್ತ ಶಿಕ್ಷಕರಿಗೆ ಅನ್ಯಾಯವಾಗಿದೆ. ಆದರೆ  ಸರ್ಕಾರ 6ನೇ ವೇತನ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ಸರ್ಕಾರ ಮನೆ ಬಾಡಿಗೆ ಭತ್ಯೆ, ಮತ್ತು ನಗರ ಭತ್ಯೆ 2001 ರ ಜನಗಣತಿ ಆಧಾರದ ಮೇಲೆ ಪುನರ್ ವರ್ಗೀಕರಿಸಿ ಪರಿಷ್ಕರಿಸಲಾಗಿತ್ತು. ಆದರೆ ರಾಜ್ಯ  ಬಜೆಟ್‌ನಲ್ಲಿ  ಈ ಬಾರಿ ಕೇವಲ ಬೆಂಗಳೂರು ನಗರದವರಿಗೆ ಮಾತ್ರ ಮನೆ ಬಾಡಿಗೆ ಭತ್ಯೆಯನ್ನು ಶೇ. 25 ರಿಂದ 30ಕ್ಕೆ ಹೆಚ್ಚಿಸಲಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಕಾರ್ಯ ಮಾಡುವ 5 ಲಕ್ಷ ನೌಕರರನ್ನು ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು.
  ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಶಿಕ್ಷಕರಿಗೆ ಶೇ. 20 ರಿಂದ ಶೇ.10 ರಷ್ಟು ಮನೆ ಬಾಡಿಗೆ ಭತ್ಯೆಯನ್ನು ನೀಡಬೇಕೆಂದು ಜಂಟಿ ಕ್ರೀಯಾ ಸಮಿತಿ ಆಗ್ರಹಿಸಿದೆ. ಈ ವೇಳೆ ಕ್ರಿಯ ಸಮಿತಿಯ ಪ್ರಮುಖರಾದ ಅಧ್ಯಕ್ಷ ವಿಠ್ಠಲ್ ವಗ್ಗನ, ಕಾರ್ಯಾದ್ಯಕ್ಷ ಡಾ. ಸಯ್ಯದ್ ಶಿರಾಜೋದ್ದೀನ್, ವಿಶ್ವನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments