ಏಡ್ಸ್ ಜನಜಾಗೃತಿ ಅಭಿಯಾನಕ್ಕೆ ಚಾಲನೆ
ಜೇವರ್ಗಿ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ಯುವ ಜನಾಂಗ ಮುಂದಾಗಬೇಕು ಎಂದು ಬರ್ಡ್ ಹೀಲ್ಸ್ ಸಂಸ್ಥೆಯ ನಿರ್ದೇಶಕ ಬ್ರದರ್ ಥಾಮಸ್ ಅಭಿಪ್ರಾಯಪಟ್ಟರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಬರ್ಡ್ಸ್ ಹಿಲ್ಸ್ ಸಂಸ್ಥೆಯಿಂದ ಏರ್ಪಡಿಸಿದ್ದ ಏಡ್ಸ್ ಕುರಿತು ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪಾರ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕಿ ಮಹಾದೇವಿ, ಹಾಲೆಂಡ್ ದೇಶದ ಡಾ. ಕಾರ್ಲೋ, ಡಾ. ತೆರೇಸಾ,ದಿವ್ಯ ಜೀವನ ಸಂಸ್ಥೆಯ ಮಲ್ಲಿಕಾರ್ಜುನ ಬಿರಾದಾರ, ಬಡ್ಸ್ ಹಿಲ್ಸ್ ಸಂಸ್ಥೆಯ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಬರ್ಮಾ ಕರಕಿಹಳ್ಳಿ, ನಬಿಸಾಬ್ ಹಿಪ್ಪರಗಿ, ಸಿದ್ದಪ್ಪ ಇದ್ದರು. ಅರ್ಚನಾ ಆರ್ ಸ್ವಾಗತಿಸಿದರು. ಜಯಶ್ರೀ ಎನ್ ನಿರೂಪಿಸಿದರು. ಮಲ್ಲಿಕಾರ್ಜುನ ಬರ್ಮಾ ವಂದಿಸಿದರು. ಇದಕ್ಕೂ ಮುನ್ನ ಜನಜಾಗೃತಿ ಅಭಿಯಾನ ನಿಮಿತ್ತ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.