ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಸಂಶೋಧನೆ ಗುಣಮುಖದ ಸಂದೇಹಗಳಿವೆ'

Parashurama
Updated On : 15 Feb 2013, 11:34 am

ಗುಲ್ಬರ್ಗ: ಸಂಶೋಧನೆಯ ಗುಣಮಟ್ಟದ ಬಗ್ಗೆ ಸಂದೇಹಗಳಿವೆ. ಸಂಶೋಧನೆಯ ಗುಣಮಟ್ಟ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಭಾಷಾ ನಿಕಾಯದ ಡೀನ್ ಪ್ರೊ. ಎನ್. ನಾಗರಾಜ ಹೇಳಿದರು. ಅವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗವು ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಸಂಶೋಧನಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂಬೈ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್‌ನ ಪ್ರಾಧ್ಯಾಪಕಿ ಡಾ. ಕೆ.ಸಿ ಬಿಂದು ಮಾತನಾಡಿ, ಸಂಶೋಧನೆಗೆ ಸಂಸ್ಥೆಗಳು ಒತ್ತಾಯಿಸುತ್ತಿವೆ. ಪಿಎಚ್‌ಡಿ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗುತ್ತಿದೆ. ಸಮಾಜದಲ್ಲಿ ಅಸಮಾನತೆ ಇದೆ. ಇಂಗ್ಲೀಷ್ ಪ್ರಭುಶಕ್ತಿ ಪಡೆದುಕೊಂಡು ಜನರನ್ನು ಇಬ್ಬಾಗಿಸುತ್ತಿದೆ. ಇಂಗ್ಲಿಷ್‌ನ ಸಾರ್ವಭೌಮತೆಯನ್ನು ಪ್ರಶ್ನಿಸಬೇಕು. ಇಂಗ್ಲೀಷ್‌ನ ಸ್ಥಾನಪಲ್ಲಟ ಮಾಡಬೇಕು. ಭಾಷೆ ಹಾಗೂ ಸಾಹಿತ್ಯಿಕ ಬೇಧಗಳನ್ನು ಅಳಿದು ಹಾಕಬೇಕೆಂದು ಹೇಳಿದರು. ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಅಲಿ ರಜಾ ಮೂಸವಿ ಮಾತನಾಡಿದರು.
ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗ ಮುಖ್ಯಸ್ಥ ಡಾ. ಬಸವರಾಜ ಡೋಣೂರ, ಕ್ಲಾಸಿಕಲ್ ಕನ್ನಡದ ನಿರ್ದೇಶಕ ಪ್ರೊ. ಮಲ್ಲಿಕಾರ್ಜುನ, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಶಿವಗಂಗಾ ರುಮ್ಮಾ, ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ಸುನೀತಾ ಮಂಜನಬೈಲ್ ಮಾತನಾಡಿದರು. ಡಾ. ಆರ್. ವಿಜಯಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ವೀರೇಶ ಬಡಿಗೇರ ಸ್ವಾಗತಿಸಿ, ಬಿ.ಕೆ. ಪಾಯಗೊಂಡೆ ವಂದಿಸಿದರು. ಮಹೇಂದ್ರ ಎಮ್. ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments