ಸಾತನೂರ ಪ್ರೌಢಶಾಲೆಗೆ ಗ್ರಾಮಸ್ಥರಿಂದ ದೇಣಿಗೆ
ಚಿತ್ತಾಪುರ: ತಾಲೂಕಿನ ಸಾತನೂರಿನ ಸರ್ಕಾರಿ ಫ್ರೌಡಶಾಲೆಯಲ್ಲಿ ಸಮಗ್ರ ಅಭಿವೃದ್ಧಿಗಾಗಿ ಗ್ರಾಮಸ್ಥರು ದೇಣಿಗೆ ನೀಡಿದ್ದಾರೆ. ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರೌಢಶಾಲೆಯಲ್ಲಿನ ಮಕ್ಕಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ತೋರುತ್ತಿರುವ ಸಾಧನೆ, ಶಾಲೆಯ ಶಿಕ್ಷಕರ ಪರಿಶ್ರಮ, ಕಾರ್ಯ ಚಟುವಟಿಕೆಗಳನ್ನು ಮೆಚ್ಚಿ, ಮಕ್ಕಳು ಇನ್ನು ಹೆಚ್ಚಿನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಪ್ರೋತ್ಸಾಹಿಸಿ ಶಾಲಾಭಿವೃದ್ಧಿಗಾಗಿ ಗ್ರಾಮಸ್ಥರಾದ ಹಾಗೂ ಗ್ರಾಪಂ ಅಧ್ಯಕ್ಷ ಭೀಮಣ್ಣಾ ಸೀಬಾ 5 ಸಾವಿರ, ಎಸ್ಡಿಎಂಸಿ ಉಪಾಧ್ಯಕ್ಷ ಮಲ್ಲಣ್ಣ ಅಲ್ಲೂರಕರ್ 3 ಸಾವಿರ, ಬಸಯ್ಯ ಸ್ವಾಮಿ ಸ್ಥಾವರಮಠ 2 ಸಾವಿರ, ಹೀಗೆ ಒಟ್ಟು 10 ಸಾವಿರ ಶಾಲೆಗೆ ದೇಣಿಗೆ ನೀಡಿದ್ದಾರೆ ಎಂದು ಶಾಲೆಯ ಮುಖ್ಯ ಗುರು ಶಿವಮ್ಮ ದೊಡ್ಮನಿ, ದೈಹಿಕ ಶಿಕ್ಷಕ ದೇವಿಂದ್ರ ರೆಡ್ಡಿ ದುಗನೂರ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.