ಗುಲ್ಬರ್ಗಾ

ಜವಳಗಾ(ಬಿ): ಕುಡಿವ ನೀರಿನ ಸಮಸ್ಯೆ

ಗುಲ್ಬರ್ಗ: ಆಳಂದ ತಾಲೂಕಿನ ಶ್ರೀಚಂದ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಜವಳಗಾ (ಬಿ) ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಲ್ಲಿನ ಜನರು ಮತ್ತು ಜಾನುವಾರುಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ. ಇರುವ ಒಂದೆರಡು ಕೈ ಪಂಪುಗಳು ಸಂಪೂರ್ಣ ಬತ್ತಿ ಹೋಗಿವೆ.
ರೈತರು ಕೂಲಿ ಕಾರ್ಮಿಕರು ಹೊಲ ಗದ್ದೆಗಳಲ್ಲಿ ದುಡಿಯುವುದನ್ನು ಬಿಟ್ಟು ಖಾಲಿ ಕೊಡಗಳನ್ನು ಹಿಡಿದು ಕುಡಿಯುವ ನೀರಿಗಾಗಿ ಬಾವಿಗಳನ್ನು ಹುಡುಕಿ ತಿರುಗುತ್ತಿದ್ದಾರೆ. ಇದ್ದ ಅನೇಕ ಬಾವಿಗಳು ಸರಿಯಾದ ಮೆಟ್ಟಿಲುಗಳೇ ಇಲ್ಲ ಎಂದು ಕಮಲಾಪುರ ಬ್ಲಾಕ್ ಕಾಂಗ್ರೆಸ್  ಕಾರ್ಯದರ್ಶಿ ಅಂಬಾರಾಯ ಜಿ. ನಾಟೀಕಾರ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಸಂಬಂಧಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಳಂದ ತಹಸೀಲ್ದಾರರು ಕೂಡಲೇ ಕಾರ್ಯಪ್ರವರ್ತಕರಾಗಿ ಜವಳಗಾ (ಬಿ) ಗ್ರಾಮದಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಸಮಸ್ಯೆ ಬಗೆಹರಿಸಲು ವಿನಾಕಾರಣ ವಿಳಂಬ ಮಾಡಿದರೆ ಗ್ರಾಮದ ಜನರು ಮತ್ತು ಜಾನುವಾರುಗಳ ಸಮೇತ ಖಾಲಿ ಕೊಡಗಳನ್ನು ಹಿಡಿದು ಕುಡಿಯುವ ನೀರು ಕೊಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!