ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಹದಗೆಟ್ಟಿರುವ ಕೂಡಲಗಿ ಕರಡಕಲ್ ರಸ್ತೆ; ತೊಂದರೆ

Lingaraj Badiger
Updated On : 22 Feb 2013, 11:55 am

ಕೆಂಭಾವಿ: ಕೂಡಲಗಿ- ಕರಡಕಲ್ ನಡುವಿನ 4 ಕಿಮೀ ರಸ್ತೆ ಸಂಪೂರ್ಣ ಹದಗೆಟ್ಟು ಚರಂಡಿಯಂತಾಗಿದ್ದರೂ ಯಾವೊಬ್ಬ ಅಧಿಕಾರಿಗಳೂ ಗಮನಹರಿಸುತ್ತಿಲ್ಲ ಎಂದು ದಲಿತ ಮುಖಂಡ ವಿರುಪಾಕ್ಷಿ ಕರಡಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  ಈ ರಸ್ತೆ ಯಾವಾಗಲೂ ನೀರು ತುಂಬಿ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಕೃಷ್ಣಾ ಭಾಗ್ಯ ಜಲನಿಗಮದವನ್ನು ವಿಚಾರಿಸಿದರೂ ಈ ರಸ್ತೆ ನಮಗೆ ಸಂಬಂಧ ಪಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಿದ್ದ ಮೇಲೆ ಈ ರಸ್ತೆ ಯಾರಿಗೆ ಸಂಬಂಧಿಸಿದ್ದು ಎನ್ನುವುದೇ ತಿಳಿಯದಂತಾಗಿದೆ. ಆದ್ದರಿಂದ ಸಮಸ್ಯೆ ಪರಿಹಾರಕ್ಕೆ ನಾವು ಯಾರನ್ನು ಕೇಳಬೇಕು ಎಂಬುದೇ ತಿಳಿಯದಂತಾಗಿದೆ. ರಸ್ತೆ ಹದಗೆಟ್ಟಿದ್ದು ಸಂಚರಿಸಲು ಜನ ಪರದಾಡುವಂತಾಗಿದೆ.
  ಇತ್ತೀಚೆಗೆ ಶಾಸಕರು ರಸ್ತೆ ದುರಸ್ತಿಯನ್ನು ಲೊಕೋಪಯೋಗಿ ಇಲಾಖೆಯಿಂದ ಮಾಡಿಸುವುದಾಗಿ ಹೇಳಿದ್ದರು. ಆದರೆ ಕಾಮಗಾರಿ ಮಾತ್ರ ಇನ್ನು ಪ್ರಾರಂಭವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆ ದುರಸ್ತಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement