ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸಹಕರಿಸಲು ರೈತರಿಗೆಕೆಬಿಜೆಎನ್ನೆಲ್ ಮನವಿ

Rashmi Kasaragodu
Updated On : 28 Feb 2013, 11:57 am

ಯಾದಗಿರಿ: ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಸದ್ಯ ಸಂಗ್ರಹವಿರುವ ನೀರು ಬೇಸಿಗೆಯಲ್ಲಿ ಕುಡಿವ ನೀರು ಪೂರೈಕೆಗೆ ಮಾತ್ರ ಸಾಕಾಗುವಷ್ಟಿದ್ದು, ಫೆ.20ರಿಂದ ಕಾಲುವೆಯಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಸಹಕರಿಸಬೇಕೆಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ಫೆ.20ರವರೆಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಲಾಗಿದೆ. ಆದರೆ ನಾಡಿನಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಕೃಷಿ ಚಟುವಟಿಕೆಗೆ ಉಪಯೋಗಿಸುವುದನ್ನು ನಿಷೇಧಿಸಿ, ಈಗ ಸಂಗ್ರಹವಿರುವ ನೀರನ್ನು ಕೇವಲ ಕುಡಿಯುವ ಉಪಯೋಗಕ್ಕೆ ಮಾತ್ರ ಬಳಸುವಂತೆ ಸೂಚಿಸಿದೆ. ಆದ್ದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ಇದಕ್ಕೆ ಸಹಕರಿಸಬೇಕು ಎಂದು ನಿಗಮದ ಪ್ರಧಾನ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement