ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸುಸೂತ್ರ ಮತದಾನಕ್ಕೆ ಶ್ರಮಿಸಿ: ಜಿಲ್ಲಾಧಿಕಾರಿ ಜಮಾದಾರ

Rashmi Kasaragodu
Updated On : 1 Mar 2013, 10:53 am

ಯಾದಗಿರಿ: ನ್ಯಾಯ ಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಯಲು ಸಿಬ್ಬಂದಿ ಶ್ರಮಿಸಬೇಕು. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಎಲ್ಲ ಸಿಬ್ಬಂದಿ ತರಬೇತಿ ಪಡೆದು ಸಿದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಮಾದಾರ ಹೇಳಿದರು.
  ನಗರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಚುನಾವಣೆ ಸಿಬ್ಬಂದಿಗೆ ನಡೆಯುತ್ತಿರುವ ತರಬೇತಿ ಕಾರ್ಯಾಗಾರಕ್ಕೆ ಗುರುವಾರ ಭೇಟಿ ನೀಡಿ ಸೂಕ್ತ ಮಾಹಿತಿ ನೀಡಿದರು.  ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ತರಬೇತಿ ಇದ್ದಂತೆ. ಆದ್ದರಿಂದ ಸಿಬ್ಬಂದಿ ಸೂಕ್ತ ಮಾಹಿತಿ ಪಡೆದುಕೊಂಡು ಸಿದ್ಧರಾಗಬೇಕಿದೆ. ಯಾವುದೇ ರೀತಿಯ ಲೋಪದೋಷ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆ ಎದುರಾದರೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಳ್ಳಬೇಕು. ಮತಯಂತ್ರ ಕಾರ್ಯನಿರ್ವಹಿಸುವ ಬಗೆಯನ್ನು ತಿಳಿದುಕೊಳ್ಳಬೇಕು. ಮತಯಂತ್ರದಲ್ಲಿ ಸಮಸ್ಯೆ ಇದ್ದಲ್ಲಿ ತರಬೇತಿ ಸಮಯದಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಚುನಾವಣಾ ವೀಕ್ಷಕ ಟಿ.ಎಚ್.ಎಂ. ಕುಮಾರ, ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು, ಸಹಾಯ ಆಯುಕ್ತ ಪರಶುರಾಮ, ಚುಣಾವಣೆ ತಹಸೀಲ್ದಾರ್ ಗುರು ಪಾಟೀಲ, ಶಿರಸ್ತೇದಾರ ಮಲ್ಲಿಕಾರ್ಜುನ, ಚನ್ನಮಲ್ಲಿಕಾರ್ಜುನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement