ಶರಣರ ನಡೆ-ನುಡಿ ಜೀವನದಲ್ಲಿ ಅಳವಡಿಸಿಕೊಳ್ಳಿ: ಸುತ್ತೂರುಶ್ರೀ
ಜೇವರ್ಗಿ: ಶರಣರ ನಡೆ-ನುಡಿ ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಸುತ್ತೂರು ಸಂಸ್ಥಾನ ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ಸೊನ್ನ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿರಕ್ತಮಠದಿಂದ ಮೂರು ದಿನಗಳ ಪರ್ಯಂತ ಏರ್ಪಡಿಸಿದ್ದ ಸಮಾಜೋತ್ಸವ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಹರಿಹರದ ಪಂಚಮಸಾಲಿ ಜಗದ್ಗುರು ಸಿದ್ದಲಿಂಗ ಸ್ವಾಮೀಜಿ, ಜೇರಟಗಿಯ ಮಹಾಂತ ಸ್ವಾಮೀಜಿ, ಸುಲಫಲದ ಮಹಾಂತ ಸ್ವಾಮೀಜಿ, ಕುಕನೂರಿನ ಚನ್ನಮಲ್ಲಯ್ಯ ಸ್ವಾಮೀಜಿ, ಪಾಳಾದ ಶ್ರೀಗಳು ಸಮ್ಮುಖ ವಹಿಸಿದ್ದರು. ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಉದ್ದಿಮೆದಾರ ಬಿ.ಜಿ. ಪಾಟೀಲ್ ಪಾಲ್ಗೊಂಡಿದ್ದರು.