ನಾಳೆ ಗುಲ್ಬರ್ಗ ಬಂದ್ಗೆ ಕರೆ
ಗುಲ್ಬರ್ಗ: ಪ್ರತಿ ಕ್ವಿಂಟಲ್ ತೊಗರಿಗೆ ಉತ್ತೇಜನಾತ್ಮಕ 5 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಲು ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ವಿವಿಧ ರೈತಪರ ಸಂಘಟನೆಗಳು ಜ.29 ರಂದು ಗುಲ್ಬರ್ಗ ಬಂದ್ಗೆ ಕರೆ ನೀಡಿವೆ. 5 ಸಾವಿರ ಬೆಂಬಲ ಬೆಲೆ ನಿಗದಿಪಡಿಸುವಂತೆ ಕಳೆದ ಒಂದೂವರೆ ತಿಂಗಳಿಂದ ವಿವಿಧ ಹಂತದ ಹೋರಾಟ ನಡೆಸಲಾಗಿದೆ. ಜತೆಗೆ ನಾಲ್ಕು ಬಾರಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಭೇಟಿಯಾಗಿ ಮನವರಿಕೆ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರಕ್ಕೆ ರೈತರ ಬಿಸಿ ಮುಟ್ಟಿಸಲು ಜ. 29 ರಂದು ಗುಲ್ಬರ್ಗ ಬಂದ್ಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.