ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಲ್ಯಾಪುರೆ ರಾಜಿನಾಮೆ, ಕ್ಷೇತ್ರದ ಜನತೆಗೆ ಅವಮಾನ

Lingaraj Badiger
Updated On : 1 Feb 2013, 11:11 am

ಚಿಂಚೋಳಿ: ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಗೊಂಡು ಶಾಸಕ ಮತ್ತು ಸಚಿವರಾಗಿ ಅಧಿಕಾರ ಅನುಭವಿಸಿದ ಮಾಜಿ ಶಾಸಕ ಸುನೀಲ್ ವಲ್ಯಾಪುರೆ ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಕ್ಷೇತ್ರದ ಜನತೆಗೆ ಅವಮಾನಗೊಳಿಸಿದ್ದಾರೆಂದು ತಾಲೂಕು ಬಿಜೆಪಿ ಹಿರಿಯ ಮುಖಂಡ, ಎಪಿಎಂಸಿ ನಿರ್ದೇಶಕ ರಮೇಶ ಯಾಕಾಪುರ ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, 2008ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಅವರು ಬಿಜಾಪುರ ಜಿಲ್ಲೆಯವರಾಗಿದ್ದರು ಸಹ ಯಾವುದೇ ತಾರತಮ್ಯ ಇಲ್ಲದೆ ಚುನಾವಣೆಯಲ್ಲಿ ಅವರ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಅವಮಾನಗೊಳಿಸಿದ್ದಾರೆ ಎಂದರು.
ಇವರು ಚಿಂಚೋಳಿ ತಾಲೂಕಿನಲ್ಲಿ ಮಾಡಿರುವ ಸಾಧನೆ ಕೇವಲ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಹೊರತು ಯಾವುದೇ ವ್ಯಕ್ತಿಯಿಂದ ಅಲ್ಲ, ಜಿಲ್ಲೆಯ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಒಳಪಟ್ಟಿರುವ ತಾಲೂಕಿನ ಜನತೆಗೆ ಮೂಲಸೌಕರ್ಯಗಳನ್ನು ನೀಡುವುದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮತ್ತು ಹಾಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಲವು ಯೋಜನೆ ಅಡಿಯಲ್ಲಿ ಬಿಜೆಪಿ ಸರ್ಕಾರದಿಂದ ಸಾಕಷ್ಟು ಅನುದಾನ ನೀಡಿ ಅಭಿವೃದ್ಧಿಪಡಿಸಿದ್ದಾರೆ ಎಂದರು.
ಮುಂದೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಕೆಜೆಪಿಯಿಂದ ಸ್ಪರ್ಧಿಸಿದರೂ ಸಹ ಅವರ ಸೋಲು ಖಚಿತವಾಗಿದೆ. ಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement