ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಸ್ತೆ ತಡೆ

Lingaraj Badiger
Updated On : 1 Feb 2013, 11:12 am

ಚಿಂಚೋಳಿ: ತಾಲೂಕಿನ ಕೊಳ್ಳುರ ಗ್ರಾಮಸ್ಥರು ತಮ್ಮ ಗ್ರಾಮದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬುಧವಾರ ಚಿಂಚೋಳಿ- ಬೀದರ್ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
 ಕೊಳ್ಳುರ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ತುಂಬಾ ನಿಧಾನಗತಿಯಿಂದ ನಡೆಯುತ್ತಿದೆ, ರಸ್ತೆ ಕಾಮಗಾರಿ ಕಳಪೆಮಟ್ಟದಿಂದ ನಡೆಯುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು. ರಸ್ತೆಯಲ್ಲಿ   ವಾಹನಗಳ ಸಂಚಾರದಿಂದ ಧೂಳಿನಿಂದ ಗ್ರಾಮಸ್ಥರು ತೊಂದರೆ ಪಡುವಂತಾಗಿದೆ ಎಂದು ತಮ್ಮಾರೆಡ್ಡಿ ಸೇರಿಕಾರ್ ಅಧಿಕಾರಿಗಳ ಗಮನಕ್ಕೆ ತಂದರು.
ಕೊಳ್ಳುರ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ತಾಂತ್ರಿಕವಾಗಿಲ್ಲ, ಮುಂದೆ ಅನಾಹುತಗಳ ಸಂಭವಿಸುವ ಸಾಧ್ಯತೆಗಳಿವೆ. ಬೀದರ್- ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯಲ್ಲಿ ಚರಂಡಿ ನಿರ್ಮಿಸಬೇಕು ಮತ್ತು ಇನ್ನೀತರ ಬೇಡಿಕೆಗಳ ಮನವಿ ಪತ್ರವನ್ನು ಕೊಳ್ಳುರ ಗ್ರಾಮಸ್ಥರು ತ ಹಸೀಲ್ದಾರ್‌ಗೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement