ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪ್ರವಾಸಿ ತಾಣವಾಗಿ ಅಭಿವೃದ್ಧಿ: ಮೇದಾ

Lingaraj Badiger
Updated On : 2 Jul 2013, 10:52 am

ಯಾದಗಿರಿ: ಜಿಲ್ಲೆಯ ಜನರ ಆಕರ್ಷಣೀಯ ಕೇಂದ್ರವಾಗಿರುವ ಹತ್ತಿಕುಣಿ ಜಲಾಶಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುರೇಶ ಮೇದಾ ಹೇಳಿದರು.  ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ನೀರು ನಿರ್ವಹಣಕಾರ ಮಲ್ಲಪ್ಪ ಹಾಗೂ ಚಾಲಕ ಸೈಯದ್ ಇಬ್ರಾಹಿಂ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲಾಶಯದ ಖಾಲಿ ಜಾಗದಲ್ಲಿ ಉದ್ಯಾನವನ ನಿರ್ಮಾಣ ಮಾಡಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಜಾರಿಗೆ ಶ್ರಮಿಸಲಾಗುವುದು ಎಂದರು. ಇಲಾಖೆ ಸಿಬ್ಬಂದಿ ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆಯಬೇಕು. ಅಂದಾಗ ಮಾತ್ರ ಎಲ್ಲರಿಗೂ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ಬರಲು ಸಾಧ್ಯ. ಉಭಯ ಸಿಬ್ಬಂದಿ ತಮ್ಮ ಸೇವಾವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು. ಸಹಾಯಕ ಎಂಜಿನಿಯರ್ ಪ್ರಕಾಶ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿವೃತ್ತಿಯಾಗುವುದು ಸಾಮಾನ್ಯ. ಜನತೆ ಅವರನ್ನು ನೆನೆಪಿಸುವುದು ಅವರು ಮಾಡಿರುವ ಒಳ್ಳೆಯ ಕೆಲಸವನ್ನು ಮಾತ್ರ ಎಂದು ಹೇಳಿದರು. ವೇದಿಕೆ ಮೇಲೆ ಜಲಾಶಯದ ಸಹಾಯಕ ಎಂಜಿನಿಯರ್ ಬಸವರಾಜ, ಅಶೋಕ ಕಾಂಬಳೆ, ನಿವೃತ್ತ ಸಿಬ್ಬಂದಿ ಮಲ್ಲಪ್ಪ, ಸೈಯದ್ ಇಬ್ರಾಹಿಂ ಇದ್ದರು. ಜಲಾಶಯದ ಮೇಲ್ವಿಚಾರಕ ಭೀಮಣ್ಣ ಸ್ವಾಗತಿಸಿದರು. ಮಹಾದೇವಪ್ಪ ವಂದಿಸಿದರು.
ಬೌದ್ಧಿಕ ಮಟ್ಟ ಹೆಚ್ಚಿಸಲು ಸಲಹೆ
ಸುರಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕಲಿಕೆಯ ಆಸಕ್ತಿ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಲು ಶಿಕ್ಷಕರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಕರೆ ನೀಡಿದರು. ಇಲ್ಲಿಯ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸಗರನಾಡು ಸೇವಾ ಪ್ರತಿಷ್ಠಾನ ಏರ್ಪಡಿಸಿದ್ದ ಜ್ಞಾನಪೀಠ ಗಾರುಡಿಗರ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುವೆಂಪು ಅವರ ಬದುಕು- ಬರೆಹ ಹಾಗೂ ಸಾಹಿತ್ಯದ ಬಗ್ಗೆ ಸಾಹಿತಿ ಅಶೋಕ ಅಂಚಲಿ ವಿಶೇಷ ಉಪನ್ಯಾಸ ನೀಡಿದರು. ಸಾನ್ನಿಧ್ಯ ವಹಿಸಿದ್ದ ಗುರುಮಠಕಲ್ ಖಾಸಾಮಠದ ಶಾಂತವೀರ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ವಾಸುದೇವ ಗಂಗೆ, ಮುಖಂಡ ಎಚ್.ಸಿ. ಪಾಟೀಲ ಮಾತನಾಡಿದರು. ಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಾದರ ಪಟೇಲ್ ಸ್ವಾಗತಿಸಿದರು. ಲಕ್ಷ್ಮಣ ಬಿರೇದಾರ ನಿರೂಪಿಸಿದರು. ಬೀರಣ್ಣ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement