ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ತಹಸೀಲ್ದಾರ್ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Mainashree
Updated On : 4 Jul 2013, 11:12 am

ಕನ್ನಡಪ್ರಭ ವಾರ್ತೆ  ಗುಲ್ಬರ್ಗ  ಜು.3
ಗುಲ್ಬರ್ಗ ತಹಸೀಲ್ದಾರ್ ಪ್ರಕಾಶ ಚಿಂಚೋಳಿಕರ್ ಅವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಸೋಮವಾರ ಮರಳು ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಜಪ್ತಿ ಮಾಡಿ ಸರ್ಕಾರಿ ಯಾರ್ಡನಲ್ಲಿ ಶೇಖರಿಸಲಾಗುತ್ತಿತ್ತು. ಆದರೆ ಮರಳು ಲಾರಿ ಮಾಲೀಕರ ಸಂಘದವರು ಮರಳನ್ನು ಕೆಲವು ಅಧಿಕಾರಿಗಳು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ತಹಸೀಲ್ದಾರ್ ಪ್ರಕಾಶ ಚಿಂಚೋಳಿಕರ್ ಅವರ ಮೇಲೆ ಹಲ್ಲೆ ನಡೆಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ನೌಕರರು ಒತ್ತಾಯಿಸಿದರು.
ಶಹಾಬಾದ್ ರಸ್ತೆ ರಾಜಾಪುರ ಬಳಿ ಪ್ರತಿಭಟನೆ ನಡೆಸುತ್ತಿರುವ ಲಾರಿ ಮಾಲೀಕರನ್ನು ಭೇಟಿಯಾಗಲು ಬಂದ ತಹಸೀಲ್ದಾರರ ಮೇಲೆ ಮಾಲೀಕರು ಪೊಲೀಸರ ಎದುರಿನಲ್ಲೇ ಹಲ್ಲೆ ನಡೆಸಿದ್ದಾರೆ. ಕೂಡಲೇ ತಹಸೀಲ್ದಾರರಿಗೆ ರಕ್ಷಣೆ ನೀಡಬೇಕೆಂದು ಜಿಲ್ಲಾಧ್ಯಕ್ಷ ಬಿ.ಎಸ್. ದೇಸಾಯಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement