ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಶರಣಬಸವೇಶ್ವರ ಶಾಲೆಯಲ್ಲಿ ವನಮಹೋತ್ಸವ

Mainashree
Updated On : 4 Jul 2013, 11:12 am

ಗುಲ್ಬರ್ಗ: ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆ, ಅಪ್ಪಾ ಪಬ್ಲಿಕ್ ಶಾಲೆ ಸಂಯುಕ್ತಾಶ್ರಯದಲ್ಲಿ ನಗರದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಸಾಗವಾನಿ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ. ರಾಧಾದೇವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಪ್ರತಿಯೊಬ್ಬ ಪಾಲಕರು ಮತ್ತು ವಿದ್ಯಾರ್ಥಿಗಳು ಕನಿಷ್ಠ ಪಕ್ಷ ಒಂದೊಂದು ಗಿಡ ನೆಟ್ಟರೆ ನಾವು ಭೂಮಿಗೆ ಎಷ್ಟೋ ರೀತಿಯಲ್ಲಿ ಉಪಕಾರ ಮಾಡಿದಂತೆ ಎಂದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನದ ಜತೆಗೆ ಒಂದೊಂದು ಸಸಿಯನ್ನು ಕೊಡುಗೆಯಾಗಿ ನೀಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸುಮಾರು 200 ಸಸಿಗಳನ್ನು ಅಲ್ಲಿ ನೆರೆದಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಹಂಚಲಾಯಿತು.
ಕುಮಾರಿ ಸಿದ್ದಮ್ಮ ಕಲಶೆಟ್ಟಿ ಬರೆದು ಮಾರ್ಗದರ್ಶಿಸಿದ ಪರಿಸರದ ನಾಟಕ ಚಿಪ್ಕೋ ಚಳವಳಿ ಸಿಬಿಎಸ್‌ಇ ವಿದ್ಯಾರ್ಥಿಗಳಿಂದ ಪ್ರದರ್ಶಿಸಲ್ಪಟ್ಟಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರ, ಕಾಲೇಜಿನ ಪ್ರಾಚಾರ್ಯ ಎನ್. ಎಸ್. ದೇವರಕಲ್, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.
ಸರೋಜಾ ಫಿರೋಜಾಬಾದ್, ಪ್ರೀತಿ ಬೂದಿಗುಂಪಿ ಮತ್ತು ಸೃಷ್ಟಿ ನಾಗಶೆಟ್ಟಿ ಪ್ರಾರ್ಥನೆ ಗೀತೆ ಹಾಡಿದರು. ಪ್ರಸಾದ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು. ಐಶ್ವರ್ಯ ಲದ್ದೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement