22ರಂದು ಸರ್ಕಾರಿ ನೌಕರರ ಚುನಾವಣೆ
ಯಾದಗಿರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಜು. 22ರಂದು ಚುನಾವಣೆ ನಿಗದಿಗೊಳಿಸಲಾಗಿದೆ. ಜು. 11ರಿಂದ 15ರವರೆಗೆ ನಾಮಪತ್ರಗಳನ್ನು ವಿತರಿಸಲಾಗುವುದು. ಜು. 15ರ ಸಂಜೆ 5ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಜು.16 ಸಂಜೆ 4 ಗಂಟೆವರೆಗೆ ಕಾಲಾವಕಾಶ ನೀಡಲಾಗಿದೆ. ಅಂದೇ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಜು. 22ರಂದು ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ನಂತರ ಮತಗಳ ಎಣಿಕೆ ಹಾಗೂ ಫಲಿತಾಂಶವನ್ನು ಪ್ರಕಟಿಸಲಾಗುವುದು. ನಾಮಪತ್ರಗಳ ವಿತರಣೆ ಮತ್ತು ಸಂಪೂರ್ಣ ಚುನಾವಣಾ ಪ್ರಕ್ರಿಯೆಯು ಜಿಲ್ಲಾ ಸಂಘದ ಕಚೇರಿಯಲ್ಲಿ ಜರುಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸಾಬರಡ್ಡಿ ಹಾಗೂ ಅಧ್ಯಕ್ಷ ರಾಚೋಟಿಸ್ವಾಮಿ ಎಣ್ಣಿ ತಿಳಿಸಿದ್ದಾರೆ.