ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜೀವ ಬೆದರಿಕೆ ರಕ್ಷಣೆ; ಪಾಟೀಲ್ ಒತ್ತಾಯ

Lingaraj Badiger
Updated On : 8 Jul 2013, 11:21 am

ಜೇವರ್ಗಿ: ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಿ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಹಾನಿಯನ್ನು ತಪ್ಪಿಸಲು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣ ನಡೆಸುತ್ತಿರುವ ಹೋರಾಟಕ್ಕೆ ಮರಳು ಮಾಫಿಯಾ ದಂಧೆಯ ದಲ್ಲಾಳಿಗಳಿಂದ ತಮಗೆ ಜೀವ ಬೆದರಿಕೆ ಇದ್ದು ಪೊಲೀಸ್ ಇಲಾಖೆ ರಕ್ಷಣೆ ಕೊಡಬೇಕು ಎಂದು ಕರವೇ ತಾಲೂಕಾಧ್ಯಕ್ಷ ಶಂಕರಗೌಡ ಪಾಟೀಲ್ ಹಾಲಗಡ್ಲಾ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಅನೇಕ ಕಡೆಗಳಲ್ಲಿ ಲಕ್ಷಾಂತರ ಟಿಪ್ಪರ್‌ನಷ್ಟು ಅಕ್ರಮ ಮರಳು ಸಂಗ್ರಹಿಸಿಡಲಾಗಿದ್ದು, ಇದರಿಂದ ಸರ್ಕಾರಕ್ಕೆ ಸ್ಥಳೀಯ ಅಧಿಕಾರಿಗಳ ತಂಡದಿಂದಲೇ ಹಾನಿಯಾಗುತ್ತಿದೆ. ರಾಜಾರೋಷವಾಗಿ ಅಕ್ರಮ ಮರಳು ಸಾಗಿಸಲಾಗುತ್ತಿದ್ದರು ಅದನ್ನು ತಡೆಗಟ್ಟುವಲ್ಲಿ ಅಧಿಕಾರಿ ವರ್ಗ ವಿಫಲವಾಗಿದೆ ಹಾಗೂ ದಲ್ಲಾಳಿಗಳೊಂದಿಗೆ ಶಾಮಿಲಾಗಿದ್ದಾರೆಂದು ಆರೋಪಿಸಿದರು. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸಂಗ್ರಹಿಸಿ ಇಡಲಾದ ಅಕ್ರಮ ಮರಳನ್ನು ವಶಪಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement