ನಾಳೆ 'ಅನ್ನಭಾಗ್ಯ' ಉದ್ಘಾಟನೆ
ಗುಲ್ಬರ್ಗ: ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಶ್ರಯದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಕೆಜಿ.ಗೆ 1ರಂತೆ ಗರಿಷ್ಠ 30 ಕೆಜಿ ಅಕ್ಕಿ ವಿತರಿಸುವ ಕಾರ್ಯಕ್ರಮ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜು.10ರಂದು ಬೆ.11 ಗಂಟೆಗೆ ನಡೆಯಲಿದೆ.
ಪೌರಾಡಳಿತ, ಸಾರ್ವಜನಿಕ ಉದ್ಯಮಗಳು, ಅಲ್ಪಸಂಖ್ಯಾತರ ಕಲ್ಯಾಣ ವಕ್ಫ್ ಮತ್ತು ಹಜ್ ಸಚಿವರು ಹಾಗೂ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅಧ್ಯಕ್ಷತೆ. ಮುಖ್ಯ ಅತಿಥಿಗಳಾಗಿ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಸಂಸದ ಡಾ. ಧರ್ಮಸಿಂಗ್, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಜಿಪಂ ಅಧ್ಯಕ್ಷ ಶರಣಪ್ಪ ಪಾಟೀಲ್ ತೇಲ್ಕೂರ್, ಶಾಸಕರಾದ ಮಾಲಿಕಯ್ಯ ಗುತ್ತೇದಾರ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ್, ಡಾ. ಅಜಯಸಿಂಗ್, ಪ್ರಿಯಾಂಕ್ ಖರ್ಗೆ, ಡಾ. ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಕೆ.ಬಿ. ಶಾಣಪ್ಪ, ಅಲ್ಲಂಪ್ರಭು ಪಾಟೀಲ್ ಮತ್ತು ಅಮರನಾಥ ಪಾಟೀಲ್ ಆಗಮಿಸುವರು.
ಬಾಬೂಜಿ ಪುಣ್ಯಸ್ಮರಣೆ
ಗುಲ್ಬರ್ಗ: ಅಫಜಲ್ಪುರ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ, ದೇಶದ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ 27ನೇ ಪುಣ್ಯತಿಥಿ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನರಾಮ ತರುಣ ಸಂಘದಿಂದ ಆಚರಿಸಲಾಯಿತು. ಪ್ರಾಥಮಿಕ ಶಾಲೆಯ ಮುಖ್ಯಗುರು ಭಗವಂತಪ್ಪ, ರಾಜು ಎಸ್. ಕಟ್ಟಿಮನಿ, ಸಂಗಪ್ಪ, ಸಾಯಿಬಣ್ಣ ಕಟ್ಟಿಮನಿ, ಅರ್ಜುನ, ಶಾಮರಾವ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಇದ್ದರು.