ಇಂದು ಪ್ರತಿಭಟನೆ
ಗುಲ್ಬರ್ಗ: ಅರಣ್ಯ ಇಲಾಖೆಯ ದೌರ್ಜನ್ಯ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಜು.10 ರಂದು ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ. 2006 ಅರಣ್ಯ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಅಕ್ರಮ ಸಾಗುವಳಿದಾರರಿಂದ ಇನ್ನೊಮ್ಮೆ ಅರ್ಜಿಗಳು ಸ್ವೀಕರಿಸಿ ಪರಿಶೀಲಿಸಿ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು ಮತ್ತು ಭ್ರಷ್ಟಾಚಾರದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಭಾಗವಹಿಸಬೇಕೆಂದು ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮತ್ತು ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಕೋರಿದ್ದಾರೆ.