ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ಲೋಕಾಯುಕ್ತರ ಭೇಟಿ

Lingaraj Badiger
Updated On : 10 Jul 2013, 11:02 am

ಗುಲ್ಬರ್ಗ: ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರರಾವ ಕರ್ನಾಟಕ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ಜುಲೈ 10ರಂದು ಸಂಜೆ  ಗುಲ್ಬರ್ಗಕ್ಕೆ ಪ್ರಥಮ ಬಾರಿಗೆ ಆಗಮಿಸಲಿದ್ದಾರೆ.
ಜುಲೈ 10ರಂದು ಗುಲ್ಬರ್ಗ ಲೋಕಾಯುಕ್ತ ಕಚೇರಿಯಲ್ಲಿ ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ನೀಡಬಹುದು. ಜುಲೈ 11 ಹಾಗೂ 12ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 10ರಂದು ಕಚೇರಿ ಸಮಯದಲ್ಲಿ ಸಾರ್ವಜನಿಕರು ತಮ್ಮ ದೂರುಗಳಿಗೆ ಸಂಬಂಧಿಸಿದಂತೆ ಲಿಖಿತ ರೂಪದಲ್ಲಿ ವಿವರವಾಗಿ ದೂರನ್ನು ಬರೆದುಕೊಂಡು, ದೂರಿಗೆ ಸಂಬಂಧಿಸಿದ ದಾಖಲೆಗಳ ಸಮೇತ ಗುಲ್ಬರ್ಗ ಲೋಕಾಯುಕ್ತ ಕಚೇರಿಯಲ್ಲಿ ಅರ್ಜಿ ನಮೂನೆ 1ನ್ನು ಪಡೆದು ತಮ್ಮ ದೂರುಗಳನ್ನು ಭರ್ತಿ ಮಾಡಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ವಿವರಕ್ಕೆ ಗುಲ್ಬರ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕರವರ ಕಚೇರಿ ದೂ. 08472-263645 ಮತ್ತು ನಿರೀಕ್ಷರವರ ಕಚೇರಿ ದೂ. 08472-263745ನ್ನು ಸಂಪರ್ಕಿಸಲು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಅನಧಿಕೃತ ಗೈರುಹಾಜರಿ; ನೋಟಿಸ್
ಗುಲ್ಬರ್ಗ: ಜಿಲ್ಲೆಯ ಸೇಡಂ ಉಪ ಖಜಾನೆ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಅನೀಲ್‌ಕುಮಾರ್ 2011ರ ಆಗಸ್ಟ್ 23ರಿಂದ ಕಚೇರಿ ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಸದರಿ ಸಿಬ್ಬಂದಿಯವರ ಮನೆಗೆ ಎರಡು ಬಾರಿ ನೋಟಿಸ್ ಕಳುಹಿಸಿದರೂ ಕಚೇರಿ ಕೆಲಸಕ್ಕೆ ಹಾಜರಾಗಿರುವುದಿಲ್ಲ ಹಾಗೂ ಯಾವುದೇ ಪ್ರತಿಕ್ರಿಯೆ ತೋರಿಸಿರುವುದಿಲ್ಲ. ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೇಡಂ ಪತ್ರಾಂಕಿತ ಉಪ ಖಜಾನೆ ಅಧಿಕಾರಿಗಳು ನೋಟಿಸ್‌ನಲ್ಲಿ ಅಂತಿಮ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement