ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿಗಳ ಸಹಕಾರ ಅಗತ್ಯ'

Lingaraj Badiger
Updated On : 12 Jul 2013, 10:57 am

ಸುರಪುರ: ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿಗಳ ಸಹಕಾರವು ಅಗತ್ಯವಾಗಿದೆ. ಜನರ ಸುತ್ತ ಅಭಿವೃದ್ಧಿ ಕಾರ್ಯಗಳಾಗಬೇಕೇ ಹೊರತು ಅಭಿವೃದ್ಧಿಯ ಸುತ್ತ ಜನ ಸುತ್ತುವಂತಾಗಬಾರದು. ಸರ್ಕಾರದಿಂದ ಮಂಜೂರಾಗಿ ಬಂದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡು, ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಹೊತ್ತ ಅಧಿಕಾರಿಗಳು ನಿಷ್ಠೆಯಿಂದ ಸೇವೆ ಸಲ್ಲಿಸಿದಾಗ ಜನರಿಗೆ ನಿಜವಾದ ನ್ಯಾಯ ಸಿಗಲು ಸಾಧ್ಯ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು.
ಕರ್ನಾಟಕ ಪ್ರಾಂತ ಸಂಘ ತಾಲೂಕು ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಸನ್ಮಾನಗಳು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮೂಲಸೌಕರ್ಯ ಒದಗಿಸುವತ್ತ ಆದ್ಯತೆ ನೀಡುತ್ತೇನೆ. ಅಭಿವೃದ್ಧಿಯೇ ನಮ್ಮ ಮುಖ್ಯ ಗುರಿ. ರಸ್ತೆ, ಶುದ್ಧ ನೀರು ಒದಗಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದರು.
ಸಂಘದ ಗೌರವಾಧ್ಯಕ್ಷ ನಂದಣ್ಣ ವಾರಿ, ಅಧ್ಯಕ್ಷ ಧರ್ಮಣ್ಣ ದೊರೆ, ಉಪಾಧ್ಯಕ್ಷ ಹಣಮಂತ್ರಾಯ ಮಡಿವಾಳ್, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಚಿನ್ನಾಕಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಾ ನಾಯಕ, ಸಂಗಯ್ಯ ರುಕ್ಮಾಪುರ, ಬಸವರಾಜನಾಯಕ, ಬುಚ್ಚಪ್ಪ ನಾಯಕ, ಮುದ್ದಣ್ಣ ಅಮ್ಮಾಪುರ ಇತರರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement