ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಸದಾಶಿವ ಆಯೋಗ ಅನುಷ್ಠಾನಗೊಳ್ಳಲಿ'

Vishwanath S
Updated On : 14 Jul 2013, 12:39 pm

ಕ.ಪ್ರ. ವಾರ್ತೆ  ಯಾದಗಿರಿ  ಜು.10
ನ್ಯಾ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ, ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಮುಂಬರುವ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾತಿಯನ್ನು ಘೊಷಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
 ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ ಲಿಂಗೇರಿ ಮಾತನಾಡಿ, ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕೂಡಲೆ ಕ್ರಮ ಕೈಗೊಳ್ಳಬೇಕು. ಹಿಂದುಳಿದ ದಲಿತ ಜನಾಂಗ ಇನ್ನೂ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಆಯೋಗದ ಶಿಫಾರಸಿನಂತೆ ಛಲವಾದಿ ಜನಾಂಗಕ್ಕೆ ಶೇ.5, ಮಾದಿಗ ಜನಾಂಗಕ್ಕೆ ಶೇ.6ರಷ್ಟು, ಭೋವಿ, ಬಂಜಾರ ಇನ್ನಿತರ ಸಮುದಾಯಗಳಿಗೆ ಶೇ.3ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಸಚಿವ ಬಾಬುರಾವ್ ಚಿಂಚನಸೂರ್ ಮನವಿ ಸ್ವೀಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement