ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನಿವೃತ್ತಿಯಾದರೂ ಸದಾ ಕಾರ್ಯತತ್ಪರಾಗಿರಬೇಕು

Lingaraj Badiger
Updated On : 17 Jul 2013, 11:12 am

ಯಾದಗಿರಿ: ಸರ್ಕಾರಿ ಸೇವೆಯಿಂದ ನಿವೃತ್ತಿಯಾದ ನಂತರ ಆಲಸ್ಯದಿಂದ ವೃಥಾ ಕಾಲಹರಣ ಮಾಡದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದಾ ಕಾರ್ಯತತ್ಪರರಾಗಬೇಕು ಗುಲ್ಬರ್ಗ ಜಿಲ್ಲೆ ನಿವೃತ್ತ ಪೊಲೀಸ್ ಅಧಿಕಾರಿಗಳ ಅಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಸಿ. ಬೆಳಂಗಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆ ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾವು ಇಂದು ಪೊಲೀಸ್ ಸೇವೆಯಿಂದ ನಿವೃತ್ತಿಯಾಗಿದ್ದೇವೆ. ನಿವೃತ್ತ ಜೀವನ ಸದಾ ಸುಖಮಯವಾಗಿರಬೇಕಾದರೆ ನಾವು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಸಂಘದ ಮುಖಾಂತರ ಸಮಾಜ ಸೇವೆಯಲ್ಲಿ ನಿರತರಾಗಬೇಕು. ಅಲ್ಲದೆ ನಮ್ಮ ಕುಟುಂಬದ ಯಾವುದೇ ಕಾರ್ಯಕ್ಕಾಗಿ ಅಥವಾ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪೊಲೀಸ್ ಕಲ್ಯಾಣ ನಿಧಿಯಿಂದ, ಸರ್ಕಾರದಿಂದ ಸೌಲಭ್ಯ ಪಡೆದುಕೊಳ್ಳಬೇಕು. ಸಂಘದ ಏಳ್ಗೆಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement