ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಿಲ್ಲೆಯ 1.80 ಲಕ್ಷ ಮಕ್ಕಳಿಗೆ ಕಬ್ಬಿಣಾಂಶವುಳ್ಳ ಮಾತ್ರೆಗಳು

Lingaraj Badiger
Updated On : 18 Jul 2013, 11:11 am

ಯಾದಗಿರಿ: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಕಬ್ಬಿಣಾಂಶವುಳ್ಳ ಮಾತ್ರೆಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಬುಧವಾರ ಚಾಲನೆ ನೀಡಿದರು.
ನಗರದ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತ್ರೆಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ, 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸರ್ಕಾರ ಕ್ಯಾಲ್ಶಿಯಂ ಅಂಶವುಳ್ಳ ಮಾತ್ರೆಗಳನ್ನು ವಿತರಿಸುವ ವಿನೂತನವಾದ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಪ್ರತಿಯೊಂದು ಮಗುವಿಗೆ ಒಂದು ಮಾತ್ರೆ ನೀಡಲಾಗುತ್ತಿದ್ದು, ಪ್ರತಿ ಸೋಮವಾರ ಆಯಾ ಶಾಲೆಗಳಲ್ಲಿ ಈ ಮಾತ್ರೆಗಳನ್ನು ವಿತರಿಸಲಾಗುತ್ತದೆ. ಜಿಲ್ಲೆಯ ಒಟ್ಟು 1.80 ಲಕ್ಷ ಮಕ್ಕಳಿಗೆ ಈ ಮಾತ್ರೆಗಳನ್ನು ವಿತರಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ದಿಶೆಯಲ್ಲಿ ಸರ್ಕಾರ ಇಂತಹ ಮಹತ್ವವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಗಮನ ನೀಡುವುದರ ಜತೆಗೆ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಿ ತಮ್ಮ ಪಾಲಕರಿಗೆ ನೆರವಾಗಬೇಕು. ಶಿಕ್ಷಕರು ಕೂಡ ವಿದ್ಯಾಭ್ಯಾಸದಲ್ಲಿ ದುರ್ಬಲವಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲಿಕಾರ್ಜುನ ಮುಕ್ಕಾ, ಆರೋಗ್ಯ ಶಿಕ್ಷಣಾಧಿಕಾರಿ ಡಾ.ಅಭಯಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ಕ್ಷೇತ್ರಶಿಕ್ಷಣಾಧಿಕಾರಿ ಮಜರ್ ಹುಸೇನ್, ಸೂಗಪ್ಪ ಪಾಟೀಲ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement