ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನೂತನ ಗ್ರಾಮೀಣ ಠಾಣೆ ಕಟ್ಟಡಕ್ಕೆ ಅಡಿಗಲ್ಲು

Lingaraj Badiger
Updated On : 18 Jul 2013, 11:10 am

ಯಾದಗಿರಿ: ಗ್ರಾಮೀಣ ಠಾಣೆಯ ಹೊಸ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಬುಧವಾರ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾದಗಿರಿ ಜಿಲ್ಲಾ ಕೇಂದ್ರವಾದ ನಂತರ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಜಿಲ್ಲೆಗೆ ಮೂಲ ಸೌಲಭ್ಯ ಒದಗಿಸುವುದು ಅವಶ್ಯವಾಗಿದೆ. ಈ ದಿಸೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ನಗರದ ಗ್ರಾಮೀಣ ಪೊಲೀಸ್ ಠಾಣೆಯ ಹತ್ತಿರ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಶಂಕರಗೌಡ ಪಾಟೀಲ, ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಗುರುಶಾಂತ ದಾಶ್ಯಾಳ, ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಶೇಖರ, ಸಹಾಯಕ ಎಂಜಿನಿಯರ್ ಮುಸ್ತಾಫ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement