ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಸವಸಾಗರ ಜಲಾಶಯ ಭರ್ತಿ; ನೀರು ಹೊರಕ್ಕೆ

Lingaraj Badiger
Updated On : 18 Jul 2013, 11:10 am

ಯಾದಗಿರಿ: ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದ್ದು, ಅಣೆಕಟ್ಟೆ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಂದರ್ಭದಲ್ಲೂ ನೀರನ್ನು ಹೊರಬಿಡಬಹುದು ಎಂದು ಕೆಬಿಜೆಎನ್ನೆಲ್ ಅಧಿಕಾರಿಗಳು ತಿಳಿಸಿದ್ದಾರೆ.
492.25 ಮೀಟರ್ ಎತ್ತರದ ಜಲಾಶಯದಲ್ಲಿ ಬುಧವಾರ 491.87 ಮೀಟರ್ ನೀರು ಭರ್ತಿಯಾಗಿದೆ. ಆದರೆ ನೀರಿನ ಒಳಹರಿವಿನ ಪ್ರಮಾಣ ತಗ್ಗಿದೆ. ಬುಧವಾರ ಜಲಾಶಯಕ್ಕೆ 2500 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಜಲಾಶಯದಿಂದ ಎಡದಂಡೆ ಕಾಲುವೆಗೆ 1500 ಕ್ಯೂಸೆಕ್, ಬಲದಂಡೆ ಕಾಲುವೆಗೆ 100ಕ್ಯೂಸೆಕ್ ಹಾಗೂ ಎಂಪಿಸಿಎಲ್‌ಗೆ 5000 ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಡ್ಯಾಂ ಭರ್ತಿಯಾಗಲು ಇನ್ನು ಕೆಲವೇ ಅಡಿ ಬಾಕಿಯಿದ್ದು, ಆಲಮಟ್ಟಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೆ ಕೃಷ್ಣಾ ನದಿಗೆ ಬಿಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೂ ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement