ಕಿರುಕುಳ: ಮಹಿಳೆ ಆತ್ಮಹತ್ಯೆ
ಚಿಂಚೋಳಿ: ತಾಲೂಕಿನ ಗಡಿಲಿಂಗದಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಗಂಡನ ಕಿರುಕುಳ ತಾಳದೇ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಜಗದೇವಿ ಗಂಡ ಶಿವಲಿಂಗಪ್ಪ ಹಳಿಮನಿ (30) ಎಂಬ ಮಹಿಳೆ ಸಾವಗೀಡಾಗಿದ್ದಾಳೆ. ಮೃತ ಮಹಿಳೆಯೂ ತನ್ನ ಇಬ್ಬರು ಮಕ್ಕಳನ್ನು ಅಕ್ಕನ ಮನೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಬಿಡುವಂತೆ ತನ್ನ ಗಂಡನಿಗೆ ತಿಳಿಸಿದ್ದಾಳೆ. ಆದರೆ ಆಕೆಯ ಗಂಡ ನಮ್ಮ ಊರಿನಲ್ಲಿಯೇ ಶಾಲೆಗೆ ಕಳುಹಿಸಿತ್ತೆನೆಂದು ಪಟ್ಟು ಹಿಡಿದು ಜಗಳ ತೆಗೆದಿದ್ದಾನೆ. ಇದೇ ಕಾರಣಕ್ಕಾಗಿ ಪತ್ನಿ ಜಗದೇವಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಸೀಮೆಎಣ್ಣಿ ಸುರಿಸಿಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ.
ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಗುಲ್ಬರ್ಗ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಮೃತಳ ತಾಯಿ ಸಿದ್ದಮ್ಮ ಗಂಡ ಶಾಂತಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ಸುರೇಶ ಬೆಂಡೆಗುಂಬಳ ತಿಳಿಸಿದ್ದಾರೆ.