ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗುವಿವಿ ಹಾಸ್ಟೆಲ್ ನೌಕರರ ಧರಣಿ

Lingaraj Badiger
Updated On : 19 Jul 2013, 11:42 am

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.18
ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ವಿದ್ಯಾರ್ಥಿ ವಸತಿ ನಿಲಯಗಳ ನೌಕರರು ಗುರುವಾರ ಬೆಂಗಳೂರಿನ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಖಾಯಂ ಅಲ್ಲದ ನೌಕರರಿಗೆ ಖಾಯಂ ನೌಕರರಷ್ಟೇ ವೇತನವನ್ನು ಸಂಚಿತ ವೇತನದ ರೂಪದಲ್ಲಿ ನೀಡಬೇಕೆಂದು ಇಲಾಖೆಯಿಂದ 25.06.2009 ರಲ್ಲಿ ಹೊರಡಿಸಿರುವ ಆದೇಶದಂತೆ ಗುವಿವಿ ವಸತಿ ನಿಲಯ ನೌಕರರಿಗೆ ವೇತನ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ 7 ವಿದ್ಯಾರ್ಥಿ ವಸತಿ ನಿಲಯಗಳ 63 ನೌಕರರು 2006ಕ್ಕೆ ಮುಂಚಿತವಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಆದ್ದರಿಂದ 10 ವರ್ಷಗಳ ಸೇವೆಯ ಆಧಾರದಲ್ಲಿ ಅವರ ಸೇವೆಯನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ ಯಾದಗಿರಿ, ಗುಲ್ಬರ್ಗ ಜಿಲ್ಲಾಧ್ಯಕ್ಷ ರಾಘವೇಂದ್ರ ಎಂ.ಜಿ,  ಉಪಾಧ್ಯಕ್ಷ ರಾಜಶೇಖರ, ಅನಸುಯಾ, ಮಾಪಣ್ಣ, ಮಲ್ಲಿಕಾರ್ಜುನ, ರಮಾ ಸೇರಿದಂತೆ ನೂರಾರು ಕಾರ್ಮಿಕರು ಭಾವಹಿಸಿದ್ದರು.
ಆಲ್ ಇಂಡಿಯಾ ಯುಟಿಯುಸಿಯ ರಾಜ್ಯ ಉಪಾಧ್ಯಕ್ಷ ಎಂ.ಎಸ್. ಪ್ರಕಾಶ, ವಸತಿ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯ ಸಂಚಾಲಕ ಕೆ.ವಿ. ಭಟ್ ಹೋರಾಟವನ್ನು ಬೆಂಬಲಿಸಿದರು.
--
ಹೆಚ್ಚುವರಿ ಪ್ರೋತ್ಸಾಹ ಧನಕ್ಕೆ ಸ್ವಾಗತ
ಗುಲ್ಬರ್ಗ: ಪ್ರಸಕ್ತ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಜತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ ಮಾಡಿರುವುದನ್ನು ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸುತ್ತದೆ. ಇತ್ತೀಚಿಗೆ ಸಂಘದಿಂದ, ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರನ್ನು ಭೇಟಿಯಾಗಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸಮಸ್ತ ಆಶಾ ಕಾರ್ಯಕರ್ತೆಯರ ಪರವಾಗಿ ಸಂಘ ಅಭಿನಂದನೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement