ಪಡಿತರ ಚೀಟಿ; ನಿಯಮ ಮೀರಿ ಹಣ ವಸೂಲಿ
ಶಹಾಪುರ: ಪಡಿತರ ಚೀಟಿಗಾಗಿ ನಿಗದಿತ ಶುಲ್ಕ ಪಡೆಯುವಂತೆ ನಿಯಮವಿದ್ದರೂ ತಾಲೂಕಿನಲ್ಲಿ ಕಂಪ್ಯೂಟರ್ ಆಪರೇಟರ್‌ಗಳು ಮನ ಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆಂದು ಕರವೇ ತಾಲೂಕಾಧ್ಯಕ್ಷ ವೆಂಕಟೇಶ ಬೋನೇರ ಆರೋಪಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿರುವ ಅವರು, ಈ ಬಗ್ಗೆ ಅಧಿಕಾರಿಗಳಿಗೆ ಅರಿವಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಡಿತರ ಚೀಟಿಗಾಗಿ ಭಾವಚಿತ್ರ ತೆಗೆಯಲು ಕೆಲವು ಕಡೆ 400ರ ವರೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಪಡಿತರ ಚೀಟಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಅನೇಕರು ಮಾತನಾಡದೇ ಅಸಹಾಯಕತೆಯಿಂದ ಹಣ ಕೊಡುತ್ತಿದ್ದಾರೆ. ತಕ್ಷಣವೇ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ವಸೂಲಿ ದಂಧಗೆ ಇಳಿದಿರುವ ಕಂಪ್ಯೂಟರ್ ಆಪರೇಟರ್‌ಗಳಿಗೆ ಕಡಿವಾಣ ಹಾಕಬೇಕೆಂದು ಅವರು ಆಗ್ರಹಿಸಿದ್ದಾರೆ.
--