ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ

Lingaraj Badiger
Updated On : 19 Jul 2013, 11:42 am

ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಜು.18
ಪಟ್ಟಣದ ಪುರಸಭೆ, ತಹಸೀಲ್, ಸಾರ್ವಜನಿಕ ಆಸ್ಪತ್ರೆ ಹಾಗೂ ನೀರು ಶುದ್ಧಿಕರಣ ಘಟಕಕ್ಕೆ ಮತ್ತು ರಸ್ತೆ ಕಾಮಗಾರಿಗೆ ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಗುರುವಾರ ಭೇಟಿ ಪರಿಶೀಲಿಸಿದರು.
ಮೊದಲು ಪುರಸಭೆಗೆ ಭೇಟಿ ನೀಡಿ ಕಡತಗಳು ಪರಿಶೀಲಿಸಿ, ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿ ಶುದ್ಧವಾದ ನೀರು ಜನತೆಗೆ ಕಲ್ಪಿಸುವಂತೆ ಮುಖ್ಯಾಧಿಕಾರಿಗೆ ಸಲಹೆ ನೀಡಿದರು.
ನಂತರ ನೀರು ಶುದ್ಧೀಕರಣ ಘಟಕಕ್ಕೆ ಹೋಗಿ, ಯಂತ್ರಗಳು ಹಾಗೂ ಶುದ್ಧವಾಗದ ನೀರು ಪರಿಶೀಲಿಸಿದರು. ಅಲ್ಲಿನ ಬಾಟಲ್‌ನಲ್ಲಿ ನೀರು ಸಂಗ್ರಹ ಮಾಡಿ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದರು. ಕ್ಲೋರಿನ್ ಸರಬರಾಜು ಮಾಡುವ ಯಂತ್ರ ಸರಿಯಾಗಿ ಕೆಲಸ ಮಾಡದೆ ಇರುವುದನ್ನು ನೋಡಿ ಕೂಡಲೇ ಯಂತ್ರ ಸರಿಪಡಿಸುವಂತೆ ಸೂಚಿಸಿದರು. ಶುದ್ಧವಾದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಬೇಕೆಂದು ಅವರು ತಾಕೀತು ಮಾಡಿದರು.
ಸಿಮೆಂಟ್ ರಸ್ತೆ ಕಾಮಗಾರಿ ನಡೆಯುವ ಸ್ಥಳಕ್ಕೆ ಹಾಗೂ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಬಗ್ಗೆ ವಿಚಾರಿಸಿದರು. ಅಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಅವರು ಹೇಳಿದರು.
ಜಿಲ್ಲಾ ನಗರಾಭೀವೃದ್ಧಿ ಕೋಶ ಯೋಜನಾಧಿಕಾರಿ ಇಲಿಯಾಸ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಿವರಾಜ ಸಜ್ಜನಶೆಟ್ಟಿ, ತಾಲೂಕು ಆರೋಗ್ಯ ಅಧಿಕಾರಿ ಪ್ರಭುಲಿಂಗ ಮಾನಕರ್, ಪುರಸಭೆ ಮುಖ್ಯಾಧಿಕಾರಿ ಅಶೋಕ ಬಿಲಗುಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement