ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಯಾದಗಿರಿ: ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ

Vishwanath S
Updated On : 21 Jul 2013, 1:22 am

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಅ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ.
  ಜಿಲ್ಲಾಧಿಕಾರಿ ಎಫ್.ಆರ್.ಜಮಾದಾರ್  ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
 ಆ.15ರಂದು ಬೆ.8.15 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ ಧ್ವಜಾರೋಹಣ ನೆರವೇರಿಸಲಿದ್ದು, ಅಧಿಕಾರಿಗಳು ಇದಕ್ಕೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಂದು ಬೆಳಗ್ಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರವಹಿಸಿ ಗೌರವದೊಂದಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿದ್ಧತೆಗಳಿಗೆ ಸೂಚನೆ: ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಎಲ್ಲಾ ಅವಶ್ಯಕ ಪೂರ್ವ ಸಿದ್ಧತೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಕರೆ ತರಲು ಬಸ್‌ಗಳ ವ್ಯವಸ್ಥೆ ಮಾಡಬೇಕು. ಅದೆ ರೀತಿ ವಿವಿಧ ಗಣ್ಯರನ್ನು ಮತ್ತು ಹುತಾತ್ಮರಾಗಿರುವ ಜಿಲ್ಲೆಯ 3 ಯೋಧರ ಕುಟುಂಬಗಳ ಸನ್ಮಾನಕ್ಕೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಮತ್ತು ವಿವಿಧ ಪಡೆಗಳ ಪಥ ಸಂಚಲನ ಅಚ್ಚುಕಟ್ಟಾಗಿ ನಡೆಯಬೇಕು. ಅಂದು ಎಲ್ಲಾ ಸರ್ಕಾರಿ ಕಚೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ನಗರದ ವೃತ್ತಗಳಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಅಂದು ಸಂಜೆ 6 ಗಂಟೆಗೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಕಲ ಕ್ರಮಗಳನ್ನು ಕೈಗೊಳ್ಳಬೇಕು. ಗಣನೀಯ ಸೇವೆ ಸಲ್ಲಿಸಿದ ಗಣ್ಯ ವ್ಯಕ್ತಿಗಳನ್ನು ಗುರ್ತಿಸಲು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಯಿತು. ಒಟ್ಟಾರೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಎಸ್ಪಿ ವಂಶಿಕೃಷ್ಣ, ವಿವಿಧ ಇಲಾಖೆ ಅಧಿಕಾರಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement