ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನಾಳೆ ಮುತ್ತಿಗೆ

Lingaraj Badiger
Updated On : 23 Jul 2013, 11:26 am

ಗುಲ್ಬರ್ಗ: ಹಾಗರಗಾ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಜು. 24ರಂದು ಕೂಸನೂರ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಭೀಮಜ್ಯೋತಿ ಸೇವಾ ಸಂಘ ನಿರ್ಧರಿಸಿದೆ.
ಗುಲ್ಬರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಾಗರಗಾ ಗ್ರಾಮದ ಕೆಳಭಾಗದ ಹರಿಜನ ವಾರ್ಡದಲ್ಲಿ ಕಳೆದ 15 ವರ್ಷಗಳಿಂದ ಅಲ್ಲಿನ ನಾಗರಿಕರಿಗೆ ಕುಡಿಯುವ ನೀರು, ರಸ್ತೆ, ಬೀದಿ ಬೆಳಕು ಇನ್ನಿತರ ಮೂಲಭೂತ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಅಧ್ಯಕ್ಷ ಯಶವಂತ ಬಪ್ಪನ್, ಶರಣಬಸಪ್ಪ ಕೋರಿ ಆರೋಪಿಸಿದ್ದಾರೆ.
ಈ ಕುರಿತು ಗ್ರಾಪಂ ಪಿಡಿಒ ಮತ್ತು ಕಾರ್ಯದರ್ಶಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜು. 24ರಂದು ಬೆಳಗ್ಗೆ 11 ಗಂಟೆಗೆ ಕುಸೂನೂರ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಬೇಕು ಎಂದು ಪ್ರಕಟಣೆ ಮೂಲಕ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement