ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅಮಾನತಾಗಿ ತಲೆಮರೆಸಿಕೊಂಡಿದ್ದ ಇಬ್ಬರ ಅಧಿಕಾರಿಗಳಬಂಧನ

Lingaraj Badiger
Updated On : 24 Jul 2013, 11:32 am

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.23
ಜಿಪಂ ಎಂಜಿನಿಯರಿಂಗ್ ವಿಭಾಗದಲ್ಲಿ 4 ಕೋಟಿ ಅವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಅಮಾನತುಗೊಂಡು ತಲೆಮರೆಸಿಕೊಂಡಿದ್ದ ಕಿರಿಯ ಅಭಿಯಂತರ ಅರುಣಕುಮಾರ್ ಮತ್ತು ಹಣಕಾಸು ಅಧಿಕಾರಿ ಎಸ್.ಬಿ. ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಮತ್ತು ಜಿಪಂ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಚ್. ಭೀಮಕ್ಕನವರ್ ಮತ್ತು ಹಿರಿಯ ಅಭಿಯಂತರ ಚಂದ್ರಶೇಖರ ನಾಸಿ ಪರಾರಿಯಾಗಿದ್ದು, ಅವರ ಪತ್ತೆಗೂ ಪೊಲೀಸರು ಜಾಲ ಬೀಸಿದ್ದಾರೆ.
ಮೌದ್ಗಿಲ್ ತನಿಖೆ ನಡೆಸಿದ್ದರು: ಜಿಪಂ ಎಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಾಹಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಎಚ್. ಭೀಮಕ್ಕನವರ್, ಹಿರಿಯ ಅಭಿಯಂತರ ಅರುಣಕುಮಾರ್, ಹಣಕಾಸು ಅಧಿಕಾರಿ ಎಸ್.ಬಿ. ಪಾಟೀಲ್, ಕಿರಿಯ ಅಭಿಯಂತರ ಚಂದ್ರಶೇಖರ ನಾಸಿ ಅವರು ಕೋಟ್ಯಂತರ ರು. ಅವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ಅವರು ತನಿಖೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ವರದಿ ಹಿನ್ನೆಲೆಯಲ್ಲಿ ಸರ್ಕಾರ ಈ ಮೂವರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ವರದಿಯಲ್ಲಿ ಈ ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಶಿಫಾರಸ್ಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಪಂ ಸಿಇಒ ಪಲ್ಲವಿ ಆಕುರಾತಿ ಅವರು ಗುಲ್ಬರ್ಗ ವಿವಿ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಅಂತರ್ ರಾಜ್ಯಗಳಲ್ಲಿ ಸೆರೆ: ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡು ಕಿರಿಯ ಅಭಿಯಂತರ ಅರುಣಕುಮಾರ್ ಅವರನ್ನು ಜು.20ರಂದು ಮಹಾರಾಷ್ಟ್ರದ ಭಾರ್ಸಿಯಲ್ಲಿ ಮತ್ತು ಹಣಕಾಸು ಅಧಿಕಾರಿ ಎಸ್.ಬಿ. ಪಾಟೀಲರನ್ನು ಜು.21 ರಂದು ಕೇರಳದ ತ್ರಿಶೂಲ್‌ನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಸ್ಪಿ ಅಮಿತ್‌ಸಿಂಗ್, ಹೆಚ್ಚುವರಿ ಎಸ್ಪಿ ಕಾಶಿನಾಥ ತಳಕೇರಿ, ಗ್ರಾಮೀಣ ಡಿಎಸ್ಪಿ ತಿಮ್ಮಪ್ಪ ಅವರ ಮಾರ್ಗದರ್ಶನದಲ್ಲಿ ಎಂ.ಬಿ. ನಗರ ಸಿಪಿಐ ಬಸವರಾಜ ತೇಲಿ, ವಿವಿ ಪಿಎಸ್‌ಐ ಹುಸೇನ್ ಭಾಷಾ ಹಾಗೂ ಸಿಬ್ಬಂದಿ ಸೇರಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement