ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಆರ್‌ವಿ ಶಿಕ್ಷಣ ಸಂಸ್ಥೆವನ ಮಹೋತ್ಸವ

Lingaraj Badiger
Updated On : 26 Jul 2013, 11:55 am

ಯಾದಗಿರಿ: ನಗರದ ಆರ್‌ವಿ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಹಾಗೂ ಶಾಲೆಯ ಎಲ್ಲ ಕೋಣೆಗಳಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮರಾ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ವಿಭಾಗ ಅರಣ್ಯಾಧಿಕಾರಿ ಆರ್.ಆರ್. ಜಾಧವ್ ಎರಡು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳೂ ತಂತ್ರಜ್ಞಾನ ಅಳವಡಿಕೊಳ್ಳುವುದು ಅಗತ್ಯ. ಇದರಿಂದ ಶಾಲೆಯ ಆಡಳಿತ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳ ಮೇಲೆ ಗಮನ ನೀಡಲು ಸಾಧ್ಯವಾಗುತ್ತದೆ. ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳು ಸಿಸಿ ಟಿವಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದರು.
 ವನಮಹೋತ್ಸವ ಕೇವಲ ಹೆಸರಿಗೆ ಮಾತ್ರ ಆಚರಿಸದರೆ ಸಾಲದು. ಗಿಡ ಮರಗಳನ್ನು ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
--
ಕುಡಿವ ನೀರಿಗಾಗಿ ಪ್ರತಿಭಟನೆ
ಸುರಪುರ: ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಗಂಭೀರವಾಗಿದ್ದು, ಪುರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿವಿಧ ಬಡಾವಣೆಗಳ ನಾಗರಿಕರು ಗುರುವಾರ ಖಾಲಿ ಕೊಡಗಳೊಂದಿಗೆ ಮಜರ್ ಬಾವಿಯ ಮುಂದೆ ಪ್ರತಿಭಟಿಸಿ ಪುರಸಭೆ ವಿರುದ್ಧ ಹರಿಹಾಯ್ದರು.
ಟಿಪ್ಪುಸುಲ್ತಾನ ಮುಸ್ಲಿಂ ಯುವಕ ಸಂಘದ ರಾಜ್ಯಾಧ್ಯಕ್ಷ ಹರ್ಷದ ದಖನಿ ಮಾತನಾಡಿ, ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ಗಂಭೀರವಾಗಲು ಅಧಿಕಾರಿಗಳ ಬೇಜಾವಾಬ್ದಾರಿತನವೇ ಕಾರಣ. ದಿನಕ್ಕೊಂದು ಸುಳ್ಳು ಹೇಳುತಾ,್ತ ನಾಗರಿಕರಿಗೆ ಮೋಸ ಮಾಡುತ್ತಿದ್ದಾರೆಂದು ಕಿಡಿ ಕಾರಿದರು.
ತಾರತಮ್ಯ ನೀತಿ: ಪುರಸಭೆ ಅಧಿಕಾರಿಗಳು ಕೆಲ ಬಡಾವಣೆಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದು, ಇನ್ನುಳಿದ ವಾರ್ಡ್‌ಗಳ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ದಖನಿ, ವಾರದೊಳಗೆ ನೀರಿನ ವ್ಯವಸ್ಥೆ ಸರಿಪಡಿಸಬೇಕು. ಎಲ್ಲ ವಾರ್ಡ್‌ಗಳಿಗೂ ಸಮರ್ಪಕವಾಗಿ ನೀರು ಪೂರೈಸಬೇಕು. ಇಲ್ಲವಾದಲ್ಲಿ ನಾಗರಿಕರೊಂದಿಗೆ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement